SC/ST Job Reservation: ಬಡ್ತಿ ಮೀಸಲಾತಿಗೆ ಸಚಿವ ಸಂಪುಟ ಒಪ್ಪಿಗೆ!!

ಬೆಂಗಳೂರು: 

   ಬಡ್ತಿ ಮೀಸಲಾತಿಗೆ ಕಾಂಗ್ರೆಸ್​​-ಜೆಡಿಎಸ್ ಮೈತ್ರಿ ಸರ್ಕಾರದ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಹಿಂಬಡ್ತಿಗೆ ಗುರಿಯಾಗಿದ್ದ ಎಸ್​​ಸಿ ಮತ್ತು ಎಸ್​​​ಟಿ ನೌಕರರಿಗೆ ಈ ಮೂಲಕ ಸಿಹಿಸುದ್ದಿ ನೀಡಿರುವ ಸಿಎಂ ಎಚ್​​​.ಡಿ ಕುಮಾರಸ್ವಾಮಿ ಶೀಘ್ರದಲ್ಲಿಯೇ ಬಿಡ್ತಿ ಮೀಸಲಾತಿ ಕಾಯ್ದೆ ಅನುಷ್ಠಾನಕ್ಕೆ ಮುಂದಾಗಿದ್ದಾರೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು .

  ನಾವು ಕಾಯ್ದೆ ಅನುಷ್ಠಾನಗೊಳಿಸದೇ ವಿಳಂಬ ಮಾಡಿದರೇ ಮುಂದಿನ ಚುನಾವಣೆಯಲ್ಲಿ ಭಾರೀ ಕೆಟ್ಟ ಪರಿಣಾಮ ಬೀರಲಿದೆ. ಹೀಗಾಗಿ ನೀವು ಕೂಡಲೇ ಈ ಬಗ್ಗೆ ಒಪ್ಪಿಗೆ ನೀಡಬೇಕೆಂದು ಡಿಸಿಎಂ ಡಾ.ಜಿ ಪರಮೇಶ್ವರ್​​​, ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ಬಿಗಿಪಟ್ಟು ಹಿಡಿದಿದ್ದರು. ಇವರ ಒತ್ತಾಯಕ್ಕೆ ಮಣಿದ ಸಿಎಂ ಒಂದು ಸುತ್ತಿನ ಚರ್ಚೆ ನಂತರ ಒಪ್ಪಿಗೆ ನೀಡಿದ್ದಾರೆ.

  ಈ ಹಿಂದೆಯೇ ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರ ಬಡ್ತಿ ಮೀಸಲಾತಿ ಕಾಯ್ದೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿತ್ತು. ಸಿಎಂ ಎಚ್​​.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದಿದ್ದ ಹಿಂದಿನ  ಸಚಿವ ಸಂಪುಟ ಸಭೆಯಲ್ಲಿ ವಿಧೇಯಕ ಜಾರಿಗೆ ಒಪ್ಪಿಗೆ ಸೂಚಿಸಲಾಗಿತ್ತು. ಸುಪ್ರೀಂಕೋರ್ಟ್​ನಲ್ಲಿ ಇನ್ನೂ ವಿಚಾರಣೆ ಬಾಕಿ ಇದ್ದರೂ ವಿಧೇಯಕ ಜಾರಿಗೆ ತರಲು ನಿರ್ಧರಿಸಲಾಗಿತ್ತು.

   ಸಭೆ ಬಳಿಕ ಮತನಾಡಿದ್ದ ಸಚಿವ ಕೃಷ್ಣ ಭೈರೇಗೌಡ ಅವರು, ಎಸ್ಸಿ, ಎಸ್ಟಿ ಬಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ಸಂಪುಟ ಸಮ್ಮತಿ ನೀಡಿದೆ. ಈಗಾಗಲೇ ಈ ಮಸೂದೆಗೆ ರಾಷ್ಟ್ರಪತಿಗಳ ಅಂಕಿತ ಹಾಕಿದ್ದಾರೆ. ಹಾಗಾಗಿ ಕಾಯ್ದೆ ಜಾರಿಗೊಳಿಸಲಾಗುತ್ತಿದೆ. ಅಲ್ಲದೆ, ಸುಪ್ರೀಂ ಕೋರ್ಟ್ ನ ಅಂತಿಮ ತೀರ್ಪಿಗೆ ಒಳಪಡುವಂತೆ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆಯಾಗುವುದಿಲ್ಲ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ