ಬೆಂಗಳೂರು :
ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಆಗ್ರಹಿಸಿ ವಾಲ್ಮೀಕಿ ಸಮುದಾಯದವರು ಬೆಂಗಳೂರಿನ ಫ್ರಿಡಂ ಪಾರ್ಕ್ನಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಇನ್ನು ಈ ಹೋರಾಟಕ್ಕೆ ರಾಜ್ಯದ ಎಲ್ಲೆಡೆಯಿಂದ ಬೆಂಬಲ ವ್ಯಕ್ತವಾಗಿದ್ದು, ರಾಜಕೀಯ ನಾಯಕರ ಜೊತೆ ನಟ ಕಿಚ್ಚ ಸುದೀಪ್ ಕೂಡ ತಮ್ಮ ಬೆಂಬಲ ಸೂಚಿಸಿದ್ದಾರೆ.
ವಾಲ್ಮೀಕಿ ಸಮಾಜದ ಜನರಿಗೆ ಇರುವ ಮೀಸಲಾತಿಯನ್ನು ಶೇ.7.5ರಷ್ಟು ಹೆಚ್ಚಿಸಬೇಕೆಂದು ವಾಲ್ಮೀಕಿ ಸಮಾಜದ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ಪಾದಯಾತ್ರೆ ಹಾಗೂ ಪ್ರತಿಭಟನೆ ನಡೆಯುತ್ತಿದೆ. ಇದೀಗ ಈ ಹೋರಾಟಕ್ಕೆ ಸ್ಯಾಂಡಲವುಡ್ ಬೆಂಬಲವೂ ವ್ಯಕ್ತವಾಗಿದ್ದು, ನಟ ಸುದೀಪ್ ಈ ಹೋರಾಟಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.
ವಿಡಿಯೋ ಮೂಲಕ ಈ ಹೋರಾಟ ಬೆಂಬಲಿಸಿರುವ ನಟ ಸುದೀಪ್, ವಾಲ್ಮೀಕ ಸಮಾಜದ ಮಕ್ಕಳ ಭವಿಷ್ಯಕ್ಕಾಗಿ ನಡೆಯುತ್ತಿರುವ ಈ ಹೋರಾಟಕ್ಕೆ ನನ್ನ ಬೆಂಬಲವಿದೆ. ಸರ್ಕಾರ ಸೂಕ್ತವಾಗಿ ಸ್ಪಂದಿಸಿ ಸಮಸ್ಯೆಯನ್ನು ಪರಿಹರಿಸುತ್ತದೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
