ವಿಜಯಪುರ:
ಪ್ರಧಾನಿ ನರೇಂದ್ರ ಮೋದಿ ಸಂಕಲ್ಪ ಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತರು ಕೈಕೈ ಮಿಲಾಯಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪನವರ ಎದುರೇ ಶಾಸಕ ಬಸವನಗೌಡ ಯತ್ನಾಳ್ ಮತ್ತು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಬೆಂಬಲಿಗರು ಬಡಿದಾಡಿಕೊಂಡಿದ್ದಾರೆ.
ಈ ಬಾರಿ ಅಭ್ಯರ್ಥಿಯನ್ನು ಬದಲಿಸಿ ಯುವಕರಿಗೆ ಲೋಕಸಭೆ ಟಿಕೆಟ್ ನೀಡಿ ಎಂದು ಯತ್ನಾಳ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಹಾಲಿ ಸಂಸದ ರಮೇಶ್ ಜಿಗಜಿಣಗಿ ವಿರುದ್ಧ ಘೋಷಣೆ ಹಾಕುವ ಮೂಲಕ ಟಿಕೆಟ್ ನೀಡಬೇಡಿ ಎಂದು ಕಿಡಿಕಾರಿದ್ಧಾರೆ.
ಯುವಕರಿಗೆ ಮೊದಲ ಆದ್ಯತೆ ನೀಡಿ ಎಂದು ಶಾಸಕ ಬಸವರಾಜ್ ಯತ್ನಾಳ್ ಬೆಂಬಲಿಗರು ಕಿಡಿಕಾರಿದ್ದಾರೆ. ಇನ್ನು ಬಿ.ಎಸ್ ಯಡಿಯೂರಪ್ಪ ಎದುರೇ ಬಿಜೆಪಿ ಭಿನ್ನಮತ ಸ್ಪೋಟಗೊಂಡಿದೆ. ಯತ್ನಾಳ ಬೆಂಬಲಿಗರು ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಭೆಗೆ ಅಡ್ಡಿಪಡಿಸುವುದು ಸರಿಯಾದ ನಡೆಯಲ್ಲ ಎಂದು ಬಿಎಸ್ವೈಗೆ ಕಸಿಬಿಸಿ ಮಾಡಿಕೊಂಡಿದ್ದಾರೆ. ಜತೆಗೆ ‘ಭೋಲೋ ಭಾರತ್ ಮಾತಾ ಕೀ ಜೈ’ ಎಂದು ಘೋಷಣ ಹಾಕಿಸಿ ಯಲ್ಲರನ್ನು ಸುಮ್ಮನಿರಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ