ಬೆಂಗಳೂರು,
ಕಾಂಗ್ರೆಸ್ ಶಾಸಕ ಮುನಿರತ್ನ ನಿವಾಸದ ಬಳಿ ಸ್ಫೋಟ ಸಂಭವಿಸಿದೆ. ಶಾಸಕರ ನಿವಾಸದ ಬಳಿ ನಡೆದ ಘಟನೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಮುನಿರತ್ನ ಅವರ ನಿವಾಸದ ಬಳಿ ಸ್ಫೋಟ ಸಂಭವಿಸಿದೆ.
ಪ್ರಾಥಮಿಕವಾಗಿ ಸಿಲಿಂಡರ್ ಸ್ಫೋಟ ಇರಬಹುದು ಎಂದು ಶಂಕಿಸಲಾಗಿದೆ. ಮೃತಪಟ್ಟ ವ್ಯಕ್ತಿಯನ್ನು ವೆಂಕಟೇಶ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
