ನಿಂತ ಲಾರಿಗೆ ಬೈಕ್ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

ಚಾಮರಾಜನಗರ:

   ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಮರಿಯಾಲ ಮೇಲ್ಸೇತುವೆ ಬಳಿ ನಡೆದಿದೆ. ಚಾಮರಾಜನಗರ ತಾಲೂಕಿನ‌ ಕಾಳಿಹುಂಡಿ ಗ್ರಾಮದ ಬಸವರಾಜು (30) ಮೃತ ದುರ್ದೈವಿ. ಅಪಘಾತದಲ್ಲಿ ಮೃತರ  ಮಣಿ  ಎಂಬ ಮಹಿಳೆ ಗಾಯಗೊಂಡಿದ್ದು, ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

  ಬಸವರಾಜೇಂದ್ರ ಆಸ್ಪತ್ರೆಯಲ್ಲಿ ನರ್ಸ್​ ಆಗಿ ಕಾರ್ಯನಿರ್ವಹಿಸುತ್ತಿದ್ದ ತಮ್ಮ ಅಕ್ಕನನ್ನು ಮನೆಗೆ ಕರೆತರುವಾಗ ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಬಸವರಾಜು ಸಾವನ್ನಪ್ಪಿದ್ದಾರೆ. ಈ ಸಂಬಂಧ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap