ದಾವಣಗೆರೆ :
ಬಿಜೆಪಿಯ ಮಾಜಿ ಸಚಿವ ರೇಣುಕಾಚಾರ್ಯಅವರು ಕಾಂಗ್ರೆಸ್ ಪಕ್ಷವನ್ನು ಕ್ಯಾನ್ಸರ್ ಗೆ ಹಾಗು ಜೆಡಿಎಸ್ ಯನ್ನು ಮೋಹಿನಿ ಭಸ್ಮಾಸುರರಿಗೆ ಹೋಲಿಸಿ ಮೈತ್ರಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರ ತಾಂಡವಾಡುತ್ತಿದೆ. ಆದರೆ ಸಿಎಂ ಕುಮಾರಸ್ವಾಮಿ ಅವರು ಪುತ್ರನನ್ನು ಗೆಲ್ಲಿಸಿಕೊಳ್ಳಲು ಮಂಡ್ಯದಲ್ಲಿ ಠಿಕಾಣಿ ಹೂಡಿದ್ದಾರೆ. ಅವರು ಮಂಡ್ಯ ಬಿಟ್ಟು ಹೊರಗೆ ಬರಲಿ, ಆಗ ಜನರ ಕಷ್ಟ ಏನಿದೆ ಎನ್ನುವುದು ಗೊತ್ತಾಗುತ್ತದೆ. ರಾಜ್ಯದಲ್ಲಿ ಕುಡಿಯುವ ನೀರಿಗೆ ಆಹಾಕಾರವಿರುವಾಗ ಸಿಎಂ ಕುಮಾರಸ್ವಾಮಿ ಅವರು ಮಾತ್ರ ಸರ್ಕಾರದ ಹಣವನ್ನು ಮಂಡ್ಯದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿಲ್ಲ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಕುಟುಂಬದ ಸರ್ಕಾರವಿದೆ. ಕಾಂಗ್ರೆಸ್ಸಿಗರು ನಾಚಿಕೆ, ಮಾನ, ಮರ್ಯಾದೆ ಇಲ್ಲದೆ ಜೆಡಿಎಸ್‍ಗೆ ಅಧಿಕಾರ ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ಜೆಡಿಎಸ್‍ಗೆ ನೀಡಿರುವ ಬೆಂಬಲವನ್ನು ಹಿಂಪಡೆಯುತ್ತೇವೆ ಎಂದು ಕಾಂಗ್ರೆಸ್‍ನ ಕೆಲವು ಮುಖಂಡರು ನನ್ನ ಬಳಿ ಹೇಳಿದ್ದಾರೆ ಎಂದು ಹೊಸ ಬಾಂಬ್ ಸ್ಪೋಟಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ