ಅರುಣ್ ಜೇಟ್ಲಿ ಪಂಚಭೂತಗಳಲ್ಲಿ ಲೀನ

ನವದೆಹಲಿ:

ಬಿಜೆಪಿಯ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರ ಅಂತ್ಯಕ್ರಿಯೆಯನ್ನು ಇಂದು ನಿಗಮ್ ಬೋಧ್ ಘಾಟ್ ನಲ್ಲಿ ನೆರವೇರಿಸಲಾಯ್ತು.  ಬಿಜೆಪಿ ಕಚೇರಿಯಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ಅರುಣ್ ಜೇಟ್ಲಿ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಿಡಲಾಗಿತ್ತು. ಅಲ್ಲಿಂದ ಮೆರವಣಿಗೆ ಮೂಲಕ ನಿಗಮ್ ಬೋಧ್ ಘಾಟ್‍ಗೆ ತಲುಪಿ, ಮಧ್ಯಾಹ್ನ 3.15 ಸುಮಾರಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಜೇಟ್ಲಿ ಅವರನ್ನು ಇದೇ ತಿಂಗಳ 9ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಸುದೀರ್ಘ 15 ದಿನಗಳ ಕಾಲ ವೆಂಟಿಲೇಟರ್, ಐಸಿಯುನಲ್ಲಿಟ್ಟರೂ ಚಿಕಿತ್ಸೆ ಫಲಿಸದೇ ಶನಿವಾರ ಮಧ್ಯಾಹ್ನ 12.07ಕ್ಕೆ ಕೊನೆಯುಸಿರೆಳೆದಿದ್ದರು.

ಬಹ್ರೇನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಆಪ್ತ ಗೆಳೆಯ ಅರುಣ್ ಜೇಟ್ಲಿಯವರನ್ನು ನೆನೆದು ಭಾವುಕಾರದರು. ವಿದ್ಯಾರ್ಥಿ ಜೀವನದಿಂದಲೂ ನಾವಿಬ್ಬರೂ ಒಟ್ಟಿಗೆ ಬಂದಿದ್ದೇವೆ, ರಾಜಕೀಯದಲ್ಲೂ ಒಟ್ಟಿಗೆ ಕೆಲಸ ಮಾಡಿದ್ದೇವೆ. ಅವರ ಸಾವನ್ನು ಊಹಿಸಿಕೊಳ್ಳಲೂ ನನ್ನಿಂದ ಸಾಧ್ಯವಾಗುತ್ತಿಲ್ಲ ಎಂದು ಹೇಳಿ ಸಂತಾಪ ಸೂಚಿಸಿದ್ದರು.

ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಪ್ರಧಾನಿಯವರು ಜೇಟ್ಲಿ ಪತ್ನಿಗೆ ಕರೆ ಮಾಡಿ ಸಾಂತ್ವಾನ ಹೇಳಿದ್ದಾರೆ. ಈ ವೇಳೆ ಯಾವುದೇ ಕಾರಣಕ್ಕೂ ವಿದೇಶ ಪ್ರವಾಸ ರದ್ದು ಮಾಡದಂತೆ ಜೇಟ್ಲಿ ಕುಟುಂಬ ಮನವಿ ಮಾಡಿಕೊಂಡಿದೆ. ವಿದೇಶ ಪ್ರವಾಸದ ಹಿನ್ನೆಲೆಯಲ್ಲಿ ಪ್ರಧಾನಿಗಳು ಜೇಟ್ಲಿಯವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿಲ್ಲ ಎಂದು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap