ನವದೆಹಲಿ:
ಕೇಂದ್ರದ ಮಾಜಿ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿಯವರ ಆರೋಗ್ಯ ಸ್ಥಿತಿ ಭಾನುವಾರವೂ ಗಂಭೀರವಾಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಜೀವರಕ್ಷಕ ವ್ಯವಸ್ಥೆಯಲ್ಲಿದ್ದಾರೆ. ಜೇಟ್ಲಿ ಅವರನ್ನು ಎಕ್ಟ್ರಾ-ಕಾರ್ಪೊರಿಯಲ್ ಮೆಂಬ್ರೇನ್ ಆಕ್ಸಿಜನೇಷನ್ ಎಂಬ ವ್ಯವಸ್ಥೆಯಲ್ಲಿ ಇಡಲಾಗಿದೆ. ಹೃದಯ ಮತ್ತು ಶ್ವಾಸಕೋಶಗಳು ಸ್ವತಂತ್ರವಾಗಿ ಕೆಲಸ ಮಾಡಲು ಸಾಧ್ಯವಾಗದೆ ಇದ್ದಾಗ ಹೊರಗಿನಿಂದ ಕೃತಕವಾಗಿ ಬಳಸುತ್ತಾರೆ.
ಕಳೆದ ಒಂದು ವಾರದಿಂದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅರುಣ್ ಜೇಟ್ಲಿ ಅವರ ಆರೋಗ್ಯ ಶುಕ್ರವಾರ ಮತ್ತಷ್ಟು ಬಿಗಡಾಯಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಆಸ್ಪತ್ರೆಗೆ ಭೇಟಿ ನೀಡಿ ಜೇಟ್ಲಿ ಅವರ ಆರೋಗ್ಯ ವಿಚಾರಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ