ನವದೆಹಲಿ:
ಮಾಜಿ ಪ್ರಧಾನಿ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ಮನಮೋಹನ್ ಸಿಂಗ್ ಅವರು ರಾಜ್ಯಸಭೆಗೆ ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ.
ಕಳೆದ ವರ್ಷ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯಸಭೆಗೆ ಆಯ್ಕೆಯಾಗಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಮದನ್ ಲಾಲ್ ಸೈನಿ ಅವರ ನಿಧನದ ನಂತರ ಈ ಸ್ಥಾನ ಖಾಲಿ ಇದೆ. ಆದ್ದರಿಂದ ಈ ಸ್ಥಾನಕ್ಕಾಗಿ ಮನಮೋಹನ್ ಸಿಂಗ್ ಅವರು ಇದೆ ಆಗಸ್ಟ್ 13 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ.
ಈಗ ರಾಜಸ್ಥಾನ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದಲ್ಲಿರುವುದರಿಂದ ರಾಜ್ಯಸಭೆಯ ಈ ಸ್ಥಾನವನ್ನು ಸುಲಭವಾಗಿ ಗೆಲ್ಲಬಹುದು ಎಂದು ನಿರೀಕ್ಷಿಸಲಾಗಿದೆ.ಇದಕ್ಕೂ ಮೊದಲು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಜ್ಯಸಭೆಯಲ್ಲಿ 28 ವರ್ಷಗಳ ಕಾಲ ಅಸ್ಸಾಂನ್ನು ಪ್ರತಿನಿಧಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ