ಮೋದಿ, ಅಮಿತ್ ಶಾರಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ??

ನವದೆಹಲಿ: ಚುನಾವಣಾ ರ‍್ಯಾಲಿಗಳಲ್ಲಿ ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೀತಿ ಸಂಹಿತೆ ಉಲ್ಲಂಘಿಸಿದ್ದು, ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದೆ.

   ಮೋದಿ ಹಾಗೂ ಅಮಿತ್​ ಶಾ ಅವರು ಬಿಜೆಪಿ ರ‍್ಯಾಲಿಗಳ ವೇಳೆ ದ್ವೇಷ ಭಾಷಣ ಮಾಡಿದ್ದಾರೆ, ಜೊತೆಗೆ ಸೇನೆಯ ಸಾಧನೆಗಳನ್ನು ರಾಜಕೀಯ ಉದ್ದೇಶಗಳಿಗಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಸುಪ್ರೀಂ ಕೋರ್ಟ್​ನಲ್ಲಿ ಅಸ್ಸೋಂನ ಸಿಲ್ಚಾರ್ ಕ್ಷೇತ್ರದ ಶಾಸಕಿ ಸುಶ್ಮಿತಾ ದೇವ್​​ ಅರ್ಜಿ ಸಲ್ಲಿಸಿದ್ದಾರೆ. ಚುನಾವಣಾ ಆಯೋಗ 24 ಗಂಟೆಯೊಳಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

 ಸುಶ್ಮಿತಾ ದೇವ್ ಅರ್ಜಿಯನ್ನು ಪರಿಗಣಿಸಿರುವ ಸರ್ವೋಚ್ಛ ನ್ಯಾಯಾಲಯ ಮಂಗಳವಾರದಂದು ವಿಚಾರಣೆ  ನಡೆಸಲಿದೆ. ತ್ವರಿತ ವಿಚಾರಣೆಯ ಅಡಿಯಲ್ಲಿ ಅರ್ಜಿಯನ್ನು ಕೈಗೆತ್ತಿಕೊಳ್ಳಲಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ