ಪ್ರಧಾನಿ ಮೋದಿಯ ಹೆಲಿಕಾಪ್ಟರ್ ತಪಾಸಣೆ ಮಾಡಿದ ಅಧಿಕಾರಿ ಸಸ್ಪೆಂಡ್

ನವದೆಹಲಿ:

   ಪ್ರಧಾನಿ ಮೋದಿಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಪಾಸಣೆ ಮಾಡಿದ ಕರ್ನಾಟಕ ಮೂಲದ ಚುನಾವಣಾಧಿಕಾರಿ ಮೊಹಮ್ಮದ್ ಮೊಹ್ಸಿನ್ ರನ್ನು ಸಸ್ಪೆಂಡ್ ಮಾಡಲಾಗಿದೆ.

   ಐಎಎಸ್ ಅಧಿಕಾರಿಯಾಗಿರುವ ಮೊಹಮ್ಮದ್ ಮೊಹ್ಸಿನ್ ಒಡಿಶಾದ ಸಂಬಲಾಪುರ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಪ್ರಯಾಣಿಸುತ್ತಿದ್ದ ಕಾಪ್ಟರ್ ತಪಾಸಣೆ ನಡೆಸಿದ್ದಾರೆ.

   ಹೆಲಿಕಾಪ್ಟರ್ ನಲ್ಲಿ ಪ್ರಧಾನಿಗೆ ಸಂಬಂಧಿಸಿದ ಕಾಗದ ಪತ್ರಗಳನ್ನು ಮೊಹ್ಸಿನ್ ತಪಾಸಣೆ ನಡೆಸಿದ್ದರು. ಇದರಿಂದಾಗಿ ಪ್ರಧಾನಿ ಕಾರ್ಯಕ್ರಮಕ್ಕೆ ತೆರಳಲು ಅರ್ಧಗಂಟೆ ತಡವಾಗಿತ್ತು. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿತ್ತು. ಈ ಸಂಬಂಧ ಇದೀಗ ಮೊಹ್ಸಿನ್ ರನ್ನು ಅಮಾನತುಗೊಳಿಸಲಾಗಿದೆ.

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

Recent Articles

spot_img

Related Stories

Share via
Copy link
Powered by Social Snap