ಮಂಡ್ಯ:
ಶ್ರೀರಂಗಪಟ್ಟಣ ಡಿವೈಎಸ್‍ಪಿ ಯೋಗಾನಂದ್ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾರೆ. ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಕೈ, ಕಾಲಿನ ನರ ಕೊಯ್ದುಕೊಂಡು ಜಿಲ್ಲೆಯ ಶ್ರೀರಂಗಪಟ್ಟಣದ ಪೊಲೀಸ್ ಅಧಿಕಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಶ್ರೀರಂಗಪಟ್ಟಣ ವೃತ್ತದ ಡಿವೈಎಸ್‍ಪಿ ಯೋಗಾನಂದ್ ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಅಧಿಕಾರಿ. ಶ್ರೀರಂಗಪಟ್ಟಣ ತಾಲೂಕಿನ ಮಂಡ್ಯ ತಾಲೂಕು ಬಾಬುರಾಯನಕೊಪ್ಪಲಿನ ನಿವಾಸದಲ್ಲಿ ಈ ಘಟನೆ ನಡೆದಿದೆ. ತೀವ್ರ ರಕ್ತಸ್ರಾವದಿಂದ ಅಸ್ವಸ್ಥಗೊಂಡು ಮನೆಯಲ್ಲಿ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ನೋಡಿದ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು.
ಈಗ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಯೋಗಾನಂದ್ ಅವರನ್ನು ಕರೆದುಕೊಂಡು ಹೋಗಲಾಗಿದೆ. ಅಧಿಕಾರಿಯ ಆತ್ಮಹತ್ಯೆ ಯತ್ನಕ್ಕೆ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ. ಕೆಲಸದ ಒತ್ತಡದ ಮತ್ತು ಮರೆಗುಳಿ ಸಮಸ್ಯೆಯಿಂದ ಅವರು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ ಈ ಘಟನೆ ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
