ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಿಗೆ 4ನೇ ಶನಿವಾರ ಸಾರ್ವತ್ರಿಕ ರಜೆ ನೀಡಿ ಕರ್ನಾಟಕ ಸರ್ಕಾರ ಇಂದು (ಬುಧವಾರ) ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರವು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಪ್ರತಿ ತಿಂಗಳು 4ನೇ ಶನಿವಾರವನ್ನು ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಎಂದು ಘೋಷಿಸಿದೆ.
ಪ್ರಸ್ತುತ ರಾಜ್ಯ ಸರ್ಕಾರಿ ನೌಕರರಿಗೆ ಇರುವ ಹದಿನೈದು ದಿವಸಗಳ ಸಾಂದರ್ಭಿಕ ರಜೆಯನ್ನು 10 ದಿವಸಗಳಿಗೆ ಇಳಿಸಲಾಗಿದೆ ಎಂದು ಅಧಿಸೂಚಿಸಿದೆ. ಈ ಹಿಂದಿನ ಸಚಿವ ಸಂಪುಟದಲ್ಲಿ ನಾಲ್ಕನೇ ಶನಿವಾರ ರಜೆ ನೀಡುವ ಬಗ್ಗೆ ನಿರ್ಧರಿಸಿತ್ತು. ಅದರಂತೆ ಇಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಇನ್ನು ವಾಲ್ಮೀಕಿ ಜಯಂತಿ, ಕನಕ ಜಯಂತಿ, ಬಸವ ಜಯಂತಿ, ಮಹಾವೀರ ಜಯಂತಿ, ಮಹಾಲಯ ಅಮಾವಾಸ್ಯೆ, ಈದ್ವಿುಲಾದ್, ಕಾರ್ವಿುಕ ದಿನ, ಗುಡ್ ಫ್ರೈಡೇ ಹಾಗೂ ಕಾರ್ವಿುಕ ದಿನದ ರಜೆ ಮುಂದುವರೆಯಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ