ಹಾಸನ:
ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕೆಎಸ್ಆರ್ಟಿಸಿಯ ಎರಡು ರಾಜಹಂಸ ಬಸ್ಗಳು ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಮೃತಪಟ್ಟಿದ್ದು 12 ಮಂದಿ ಗಾಯಗೊಂಡಿದ್ದಾರೆ. ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕುಮಟಾದ ಪ್ರಭಾಕರ್ ಮೃತರು ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಕುಂದಾಪುರ-ಬೆಂಗಳೂರು ಹಾಗೂ ಬೆಂಗಳೂರು-ಸುಬ್ರಮಣ್ಯ ಮಾರ್ಗದ ಬಸ್ಗಳು ಪರಸ್ಪರ ಡಿಕ್ಕಿಯಾದ ಬಸ್ಗಳು ಇವು. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ