ಗದಗ :
ಪ್ರಧಾನಿ ನರೇಂದ್ರ ಮೋದಿ ನಾಥೂರಾಮ್ ಗೋಡ್ಸೆ ವಂಶಸ್ಥ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಎಪಿಎಂಸಿ ಆವರಣದಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಮಾತು ಎತ್ತಿದ್ದರೆ ಮನ್ ಕೀ ಬಾತ್ ಎನ್ನುತ್ತಾರೆ. ಅವರು ಬಡವರಿಗೆ ಏನು ಕೊಟ್ಟಿದ್ದಾರೆ. ನಾನು ಇಂದಿರಾ ಕ್ಯಾಂಟೀನ್ ಅಕ್ಕಿ ಸೇರಿದಂತೆ ಅನೇಕ ಮೂಲ ಸೌಕರ್ಯಗಳನ್ನು ಜನರಿಗೆ ನೀಡಿದ್ದೇನೆ ಎಂದು ಹೇಳಿದ್ದಾರೆ.
ಬಿಜೆಪಿಯವರು ಯುವಕರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಮಾತು ಎತ್ತಿದ್ದರೆ ಮೋದಿ ಮೋದಿ ಎನ್ನುತ್ತಾರೆ. ನೀವು ಪಕ್ಕದ ಮನೆಯವರಿಗೂ ಹೇಳಿ, ಕಾಲು ಕಟ್ಟಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿಸಿ ಎಂದು ಅವರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/04/1-6.jpg)