ಶ್ರೀನಗರ:
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಮಹಿಳಾ ವಿಶೇಷ ಪೊಲೀಸ್ ಅಧಿಕಾರಿ(ಎಸ್ ಪಿಒ)ಯನ್ನು ಅವರ ಮನೆಗೆ ನುಗ್ಗಿ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಶನಿವಾರ ನಡೆದಿದೆ.
ಉಗ್ರರಿಂದ ಹತ್ಯೆಯಾದ ಮಹಿಳಾ ಅಧಿಕಾರಿಯನ್ನು ಖುಷ್ಬೂ ಜಾನ್ ಎಂದು ಗುರುತಿಸಲಾಗಿದ್ದು, ಇಂದು ಮಧ್ಯಾಹ್ನ ಶೋಪಿಯಾನ್ ಜಿಲ್ಲೆಯ ವೆಹಿಲ್ ನಲ್ಲಿರುವ ಪೊಲೀಸ್ ಅಧಿಕಾರಿ ಮನೆಗೆ ನುಗ್ಗಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಂಡೇಟಿನಿಂದ ಗಾಯಗೊಂಡಿದ್ದ ಎಸ್ ಪಿಒ ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.