ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಕ್ಕೆ 5 ಲಕ್ಷ ಚೆಕ್!!!

ಮಂಡ್ಯ: 

   ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಕೆಆರ್ ಪೇಟೆ ತಾಲೂಕು ಅಘಲಯ ಗ್ರಾಮದ ಸುರೇಶ್ ಅವರ  ನಿವಾಸಕ್ಕೆ ಭೇಟಿ ನೀಡಲಿದ್ದಾರೆ.

   ಮೃತ ರೈತ ಸುರೇಶ್ ಭಾನುವಾರ ಬೆಳಗ್ಗೆ, ವಿಡಿಯೋವೊಂದನ್ನು ಮಾಡಿ  ಈ ಭಾಗದ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ತಿಳಿಸಿ ಅದನ್ನು ಬಗೆಹರಿಸುವಂತೆ ಮನವಿ ಮಾಡಿಕೊಂಡು ನಂತರ ಜಮೀನಿನ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಅಲ್ಲದೇ ತನ್ನ ಅಂತ್ಯಸಂಸ್ಕಾರಕ್ಕೆ ಮುಖ್ಯಮಂತ್ರಿ ಬರಬೇಕೆಂದು ಮನವಿ ಕೂಡ ಮಾಡಿಕೊಂಡಿದ್ದರು.

    ಈ ಹಿನ್ನಲೆಯಲ್ಲಿ ಇದೀಗ ಅಘಲು ಗ್ರಾಮಕ್ಕೆ ಇಂದು ಭೇಟಿ ನೀಡಲಿರುವ ಸಿಎಂ ಮೃತ ರೈತ ರಮೇಶ್ ಅವರ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ. ಹಾಗೇ  ರೈತ ಸುರೇಶ್ ಅವರ ಕುಟುಂಬದವರಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ  5 ಲಕ್ಷ ರೂ.ಗಳ ಪರಿಹಾರಧನದ ಚೆಕ್ ವಿತರಿಸಿ, ಸಾಂತ್ವನ ಹೇಳಿದರು.

ಹಾಗೇ  ಸಂತೆಬಾಚಳ್ಳಿ ಹೋಬಳಿಯ ಕೆರೆಗಳಿಗೆ ನೀರು ತುಂಬಿಸುವ ವಿಚಾರವಾಗಿ ಸ್ಥಳೀಯ ರೈತರು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ದಿನೇಶ್ ಅವರು ತಿಳಿಸಿದ್ದಾರೆ.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link