ಮಂಗಳೂರು:
ಬೆಳ್ತಂಗಡಿ ತಾಲೂಕಿನ ಹಲವೆಡೆ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳಿಗೆ ಹಾಗೂ ಕುಕ್ಕಾವು ಪಾಲನಾ ಕೇಂದ್ರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರವಾಹದಲ್ಲಿ ಮನೆ ಸಂಪೂರ್ಣ ನಾಶವಾದ ಸಂತ್ರಸ್ತರಿಗೆ ಹೊಸ ಮನೆ ಕಟ್ಟಿಕೊಳ್ಳಲು 5 ಲಕ್ಷ ರೂಪಾಯಿ, ಭಾಗಶಃ ಮನೆ ನಾಶವಾದವರಿಗೆ ಎಲ್ಲಾ ರೀತಿಯ ರಿಪೇರಿ ಕೆಲಸಗಳಿಗೆ 1 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.
ಪ್ರವಾಹ ಸಂದರ್ಭದಲ್ಲಿ ಭೂಮಿ ಪತ್ರ ಕಳೆದುಕೊಂಡ ಸಂತ್ರಸ್ತರಿಗೆ ಕೂಡಲೇ ಮನೆ ಕಟ್ಟಿಕೊಳ್ಳಲು ಭೂಮಿ ಗುರುತಿಸಿ ವಿತರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಹಾಗೆಯೇ ಸಂತ್ರಸ್ತರಿಗೆ ತಕ್ಷಣವೇ ರೂಪಾಯಿ 10,000 ನೀಡುವಂತೆ ಜಿಲ್ಲಾಧಿಕಾರಿಯವರಿಗೆ ಆದೇಶ ನೀಡಿದರು. ಸಂತ್ರಸ್ತರು ಹೊಸ ಮನೆ ಕಟ್ಟಿಕೊಳ್ಳುವವರೆಗೆ ಮಾಸಿಕ 5 ಸಾವಿರ ರೂಪಾಯಿ ಬಾಡಿಗೆ ನೀಡಲು ಯಡಿಯೂರಪ್ಪ ಆದೇಶಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ