ದಲಿತನಾಗಿರುವುದಕ್ಕೆ ಸಿಎಂ ಪಟ್ಟ 3 ಬಾರಿ ಕೈತಪ್ಪಿತು: ಪರಮೇಶ್ವರ್

ದಾವಣಗೆರೆ:

‘ನಾನು ದಲಿತ ಎಂಬ ಕಾರಣಕ್ಕೆ ಮೂರು ಬಾರಿ ಮುಖ್ಯಮಂತ್ರಿ ಹುದ್ದೆ ಕಳೆದುಕೊಂಡೆ’ ಎಂದು ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದಾವಣಗೆರೆಯಲ್ಲಿ ಭಾನುವಾರ ಕಾರ್ಯಕ್ರಮವೊಂದನ್ನುದ್ದೇಶಿಸಿ ಮಾತನಾಡುತ್ತಿದ್ದ ಪರಮೇಶ್ವರ್, “ನಾನು ದಲಿತ ಸಮುದಾಯಕ್ಕೆ ಸೇರಿದವನಾಗಿರುವ ಕಾರಣ ಮೂರು ಬಾರು ಮುಖ್ಯಮಂತ್ರಿ ಹುದ್ದೆ ಕೈತಪ್ಪಿತು.

ಪಿಕೆ ಬಸವಲಿಂಗಪ್ಪ, ಕೆ ಎಚ್ ರಂಗನಾಥ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೂ ಮುಖ್ಯಮಂತ್ರಿ ಹುದ್ದೆ ಕೈತಪ್ಪಿತು. ಏನೇ ಆಗಲಿ, ನನ್ನನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿದರು” ಎಂದು ಪರಂ ಹೇಳಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap