ರಸ್ತೆಗಿಳಿದು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಆರೋಪಿಯ ಕಾಲಿಗೆ ಫೈರಿಂಗ್‍

ಬೆಂಗಳೂರು:

     ಇಂದು ಬೆಳ್ಳಂ ಬೆಳಗ್ಗೆ ಸಿಲಿಕಾನ್​ ಸಿಟಿ ಬೆಂಗಳೂರಿನ ಪೊಲೀಸರ ಗುಂಡಿನ ಸದ್ದು ಕೇಳಿಸಿದೆ. ಲಾಕ್​ಡೌನ್​ ಆದೇಶದ ನಡುವೆಯೂ ನಿನ್ನೆ ಸಂಜಯನಗರದಲ್ಲಿ ರಸ್ತೆಗಿಳಿದು ಪೊಲೀಸರ ಮೇಲೆ ಹಲ್ಲೆ ಮಾಡಿದವನ ಮೇಲೆ ಶೂಟೌಟ್ ನಡೆದಿದೆ.

    ಬುಧವಾರ ಸಂಜಯನಗರದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ತಜೌದ್ದೀನ್​ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಪೊಲೀಸರು ಆರೋಪಿಯನ್ನು ನಿನ್ನೆ ಘಟನೆ ನಡೆದಿದ್ದ ಸ್ಥಳಕ್ಕೆ ಮಹಜರು ಪರೀಕ್ಷೆಗಾಗಿ ಇಂದು ಕರೆದೊಯ್ದಿದ್ದರು. ಈ ವೇಳೆ ಸ್ಥಳದಿಂದ ತಜೌದ್ದೀನ್​ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದ. ಜೊತೆಗೆ ಹಿಡಿಯಲು ಮುಂದಾಗಿದ್ದ ಪೊಲೀಸರ ಮೇಲೆ ಕಲ್ಲು ಎಸೆದಿದ್ದಾನೆ. ಹೀಗಾಗಿ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಘಟನೆ ಬಗ್ಗೆ  ಮಾಜಿ ಡಿಸಿಪಿಯಾಗಿದ್ದ ಅಣ್ಣಾಮಲೈ ಬೇಸರ ವ್ಯಕ್ತಪಡಿ ನ ಟ್ವೇಟ್ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

 

Recent Articles

spot_img

Related Stories

Share via
Copy link