ತುಮಕೂರು:
ವಿಶ್ವವೇ ಕೊರೊನಾ ಭೀತಿಯಿಂದ ಲಾಕ್ಡೌನ್ ಆಗಿದ್ದರು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಗೊತ್ತಿದ್ದರು ಆದರೆ ತುರುವೇಕೆರೆ ಶಾಸಕರು ಅದನ್ನೆಲ್ಲ ಮರೆತು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಇನ್ನು ಶಾಸಕರು ಸಾಮಾಜಿಕ ಅಂತರ ಮರೆತು, ಮಾಸ್ಕ್ ಸಹ ಹಾಕಿಕೊಳ್ಳದೇ ಬೇಜವಾಬ್ದಾರಿತನದಿಂದ ಸರ್ಕಾರದ ಆದೇಶ ಉಲ್ಲಂಘಿಸಿದ್ದಲ್ಲದೇ ಜನ್ಮದಿನದ ನಿಮಿತ್ತ ಬಿರಿಯಾನಿ ಊಟ ಹಾಕಿಸಿದ್ದರು ಎಂಬುದಾಗಿ ಸ್ಥಳೀಯರು ಮಾಹಿತಿ ಕೊಟ್ಟಿದ್ದಾರೆ. ಶಾಸಕರ ಈ ನಡಿವಳಿಕಿಗೆ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗೆ ಕಾರಣವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ