ಮುಂಬೈ:
ಮಹಾರಾಷ್ಟ್ರದಲ್ಲಿ ನಿನ್ನೆ 145 ಹೊಸ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 635ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 33 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಸಾಂಗ್ಲಿ, ನಾಗ್ಪುರ, ಅಹಮದ್ನಗರ, ಯವತ್ಮಾಲ್, ಸತಾರಾ, ಔರಂಗಾಬಾದ್ ಮುಂತಾದ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ. ಕೊರೊನಾ ವಿರುದ್ಧ ಜಾಗೃತಿ ಮೂಡಿಸಲು ಮಹಾರಾಷ್ಟ್ರದಲ್ಲಿ 2,849 ತಂಡಗಳು ಕಾರ್ಯ ನಿರ್ವಹಿಸುತ್ತಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
