ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 93ಕ್ಕೆ ಏರಿಕೆ

ನವದೆಹಲಿ:

   ದೇಶದಲ್ಲಿ ಇದುವರೆಗೆ 93 ಮಂದಿಯಲ್ಲಿ ಕೋವಿಡ್‌ 19 ಇರುವುದು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಸ್ಪಷ್ಟಪಡಿಸಿದೆ.

   ಕೋವಿಡ್-19ನಿಂದಾಗಿ ಕರ್ನಾಟಕ ಮತ್ತು ದೆಹಲಿ ಸೇರಿದಂತೆ ಈಗಾಗಲೇ ಇಬ್ಬರು ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ 5 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 31 ಜನರು ಸೋಂಕಿತರಾಗಿರುವುದು ತಿಳಿದುಬಂದಿದೆ.

    ದೇಶಾದ್ಯಂತ ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಮಾರಣಾಂತಿಕ ವೈರಸ್‌ ಅನ್ನು ‘ಅಧಿಸೂಚಿತ ವಿಪತ್ತು’ ಎಂದು ಘೋಷಿಸಿ ಶನಿವಾರ ಆದೇಶ ಹೊರಡಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap