ಮುಂಬೈ,:
ಮಹಾರಾಷ್ಟ್ರದ ಅಹ್ಮದ್ ನಗರದ ನಿವಾಸಿಯೊಬ್ಬರು ಕೊರೊನಾಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಅಹ್ಮದ್ ನಗರದ 50 ವರ್ಷ ವಯಸ್ಸಿನ ಮಹಿಳೆಯೊಬ್ಬರು ಬಾವಿಗೆ ಹಾರಿ ಪ್ರಾಣ ಬಿಟ್ಟಿದ್ದಾರೆ. ಮಹಿಳೆ ಬರೆದಿದ್ದಾರೆ ಎನ್ನಲಾದ ಡೆತ್ ನೋಟ್ ಸಿಕ್ಕಿದೆ. ಡೆತ್ ನೋಟ್ ನಲ್ಲಿ ಕೊರೊನಾ ವೈರಸ್ ಭೀತಿಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆಯಲಾಗಿದೆ. ಮೃತ ಮಹಿಳೆಯ ಪುತ್ರ ಡೆತ್ ನೋಟ್ ಹಾಗೂ ವಿವರಗಳನ್ನು ಪೊಲೀಸರಿಗೆ ನೀಡಿದ್ದಾರೆ. ಈ ಪತ್ರ ಆಕೆ ಬರೆದಿದ್ದಾರೆ ಎಂಬುದರ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ