ಹಾಸನ:
ಐತಿಹಾಸಿಕ ಹಾಸನಾಂಬ ದೇಗುಲ ನಾಳೆ ಗುರುವಾರ ದೇಗುಲದ ಬಾಗಿಲು ತೆರೆಯಲಾಗುತ್ತದೆ. ವರ್ಷಕ್ಕೊಮ್ಮೆ ಹಾಸನಾಂಬ ದೇಗುಲದ ಬಾಗಿಲು ತೆರೆಯಲಾಗುತ್ತದೆ. ಅ.17ರಿಂದ 29ರವರೆಗೆ ಹಾಸನಾಂಬ ದೇವಿ ದರ್ಶನ ನೀಡಲಿದ್ದಾಳೆ.
ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಹಾಗೂ 3.30 ರಿಂದ ಮುಕ್ತಾಯದವರೆಗೂ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. 300 ರೂ. ಹಾಗೂ 1000 ರೂಪಾಯಿಗಳ ಟಿಕೆಟ್ ಸೌಲಭ್ಯದ ಮೂಲಕ ಶೀಘ್ರ ದರ್ಶನಕ್ಕೂ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ. ಭಕ್ತರಿಗೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಜಿಲ್ಲಾಡಳಿತ ಕಲ್ಪಿಸಿದೆ.
ಈ ಬಾರಿ 13 ದಿನಗಳ ಕಾಲ ಹಾಸನಾಂಬ ದರ್ಶನ ಇರಲಿದೆ. ಆದರೆ ಮೊದಲ ಮತ್ತು ಕೊನೆಯ ದಿನ ಭಕ್ತಿರಿಗೆ ದೇವಿಯ ದರ್ಶನ ಇರುವುದಿಲ್ಲ. ನಾಳೆ ಮಧ್ಯಾಹ್ನ 12.30ಕ್ಕೆ ಗರ್ಭಗುಡಿ ಬಾಗಿಲು ತೆರೆಯಲಾಗುತ್ತದೆ. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆಯ ಆಶೀರ್ವಾದ ಪಡೆಯಲು ಜನರು ಸಾಗರೋಪಾದಿಯಲ್ಲಿ ಆಗಮಿಸುತ್ತಾರೆ. ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೇ, ಅನೇಕ ರಾಜ್ಯಗಳಿಂದ ಭಕ್ತರು ಹಾಸನಾಂಬ ದೇವಿಯ ದರ್ಶನ ಪಡೆಯಲು ಬರುತ್ತಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
