ಅಮೇಠಿ :
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಈ ಚುನಾವಣೆಯಲ್ಲಿ ಹಿಂದೆಂದೂ ಇಲ್ಲದಂತಹ ಭಾರೀ ಸಂಕಷ್ಟ ಎದುರಾಗಿದೆ.
ಲೋಕಸಭೆ ಚುನಾವಣೆ ಕಾವು ಜೋರಾಗಿರುವಂತೆ ಕಣದಲ್ಲಿರುವ ಅಭ್ಯರ್ಥಿಗಳ ನಡುವೆ ಆರೋಪ ಪ್ರತ್ಯಾರೋಪಗಳು ಜೋರಾಗಿವೆ. ವಯನಾಡು ಮತ್ತು ಅಮೇಠಿಯಿಂದ ಸ್ಪರ್ಧಿಸಿರುವ ರಾಹುಲ್ ಗಾಂಧಿಗೆ ಪೌರತ್ವ ವಿಷಯ ಫಜೀತಿ ತಂದಿಟ್ಟಿದೆ.
ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ರಾಹುಲ್ ನೀಡಿರುವ ದಾಖಲೆಗಳ ಕುರಿತು ಆಕ್ಷೇಪ ವ್ಯಕ್ತವಾಗಿದ್ದು, ಕಾನೂನು ಸಂಕಷ್ಟ ಎದುರಾಗಿದೆ.
ರಾಹುಲ್ ಸಲ್ಲಿಸಿರುವ ಮಾಹಿತಿ ಸಮರ್ಪಕವಾಗಿಲ್ಲ ಎಂದು ಅಮೇಠಿಯ ಪಕ್ಷೇತರ ಅಭ್ಯರ್ಥಿ ಧ್ರುವ್ ಲಾಲ್ ಎಂಬುವರು ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಹೀಗಾಗಿ ರಾಹುಲ್ ನಾಮಪತ್ರ ಪರಿಶೀಲನೆ ಸೋಮವಾರಕ್ಕೆ ಮುಂದೂಡಲಾಗಿದೆ.