ನವದೆಹಲಿ:
ಸಂವಿಧಾನದ ಹುದ್ದೆಯಲ್ಲಿರುವ ರಾಜ್ಯಪಾಲರು ತಮ್ಮ ಘನತೆಯನ್ನು ಮೀರಿ ಒಂದು ಪಕ್ಷದ ಕಾರ್ಯಕರ್ತನಂತೆ ಮಾತನಾಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.
ರಾಜಸ್ಥಾನದ ರಾಜ್ಯಪಾಲ ಕಲ್ಯಾಣ್ ಸಿಂಗ್ ಅವರು ಅಲಿಘಡದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, “ನಾವೆಲ್ಲ ಬಿಜೆಪಿ ಕಾರ್ಯಕರ್ತರು. ಪಕ್ಷದ ಗೆಲುವಿಗಾಗಿ ಮತ್ತು ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಕೆಲಸ ಮಾಡಬೇಕು. ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ದೇಶದ ಹಿತದೃಷ್ಟಿಯಿಂದ ಮಹತ್ವದ್ದು,” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.