ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು

ರಾಂಚಿ :

     ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್  ಬಹುಕೋಟಿ ಮೇವು ಹಗರಣ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಆರ್​ಜೆಡಿ ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ನಿನ್ನೆ ರಾತ್ರಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

Image result for lalu prasad yadav
    ಕಿಡ್ನಿ ಸೋಂಕಿನಿಂದ ಬಳಲುತ್ತಿದ್ದ  ಲಾಲೂ ಪ್ರಸಾದ್ ಯಾದವ್ ಅವರ ಕಿಡ್ನಿಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ, ರಕ್ತದೊತ್ತಡ ಹಾಗೂ ಶುಗರ್ ಪ್ರಮಾಣವೂ ಸ್ಥಿರವಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.  ಬಿಹಾರದ ರಾಂಚಿಯಲ್ಲಿರುವ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನಲ್ಲಿ ದಾಖಲಿಸಲಾಗಿದ್ದು, ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

71 ವರ್ಷದ ಲಾಲೂ ಪ್ರಸಾದ್ ಯಾದವ್  ಅವರ ಕಿಡ್ನಿಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಜಿಎಫ್​ಆರ್​ ಸ್ಥಗಿತಗೊಂಡಿದೆ. ಅವರ ರಕ್ತದೊತ್ತಡ ಹಾಗೂ ದೇಹದಲ್ಲಿ ಸಕ್ಕರೆ ಪ್ರಮಾಣವೂ ಏರುಪೇರಾಗುತ್ತಿದೆ. ಹೀಗಾಗಿ, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲು ಸಾಧ್ಯವಿಲ್ಲ, ಸ್ಥಿತಿ ಗಂಭೀರವಾಗಿದೆ ಎಂದು ಡಾ. ಉಮೇಶ್ ಪ್ರಸಾದ್ಮಾಹಿತಿ ನೀಡಿದ್ದಾರೆ.

        ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link