ಶಿವಮೊಗ್ಗ : ಮಂಗನ ಕಾಯಿಲೆಗೆ ಮತ್ತೊಂದು ಬಲಿ .!

ಶಿವಮೊಗ್ಗ:

      ತೀರ್ಥಹಳ್ಳಿ ಪಟ್ಟಣದಲ್ಲಿ ಮಂಗನಕಾಯಿಲೆಗೆ ಮತ್ತೊಬ್ಬರು ಬಲಿಯಾಗಿದ್ದು, ಇದರೊಂದಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಬಲಿಯಾದವರ ಸಂಖ್ಯೆ 5ಕ್ಕೆ ಏರಿದೆ. ತಾಲೂಕಿನ ಅಗ್ರಹಾರ ಹೋಬಳಿಯ ಉಡುಕೆರೆ ಗ್ರಾಮದ ಸುಬ್ರಹ್ಮಣ್ಯ(52) ಸಾವಿಗೀಡಾದವರು .

    ಕೆಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ತೀರ್ಥಹಳ್ಳಿಯ ಜೆ.ಸಿ. ಆಸ್ಪತ್ರೆಗೆ ಸೇರಿಸಲಾಗಿತ್ತು. ಕೆಎಫ್‌ಡಿ ಸೋಂಕಿರುವುದು ದೃಢಪಟ್ಟಬಳಿಕ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಅಲ್ಲಿ ಚಿಕಿತ್ಸೆ ವಿಫಲವಾಗಿ ಸೋಮವಾರ ಮೃತಪಟ್ಟಿದ್ದಾರೆ. ತೀರ್ಥಹಳ್ಳಿಯಲ್ಲಿ 105 ಮತ್ತು ಸಾಗರದಲ್ಲಿ 29 ಮಂದಿಗೆ ಸೋಂಕು ತಗುಲಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap