ಬಟ್ಟಿಕೊಲಾ ಚರ್ಚ್ ಸೇರಿ ಮೂರು ಚರ್ಚ್ಗಳಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಎರಡು ಪಂಚತಾರಾ ಹೋಟೆಲ್ಗಳಲ್ಲಿ ಸ್ಫೋಟ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ಇನ್ನು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಶ್ರೀಲಂಕಾದಲ್ಲಿ ಒಟ್ಟು 5 ಕಡೆಗಳಲ್ಲಿ ಸರಣಿ ಸ್ಫೋಟ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ಈ ಪೈಕಿ ಮೂರು ಚರ್ಚ್ ಮತ್ತು ಎರಡು ಹೋಟೆಲ್ ಗಳಲ್ಲಿ ಸರಣಿ ಬಾಂಬ್ ಸ್ಫೋಟವಾಗಿದೆ. ಅಲ್ಲದೇ ಈ ಸರಣಿ ಸ್ಫೋಟದ ಹಿಂದೆ ಯಾವ ಉಗ್ರ ಸಂಘಟನೆ ಕೈವಾಡವಿದೆ ಎಂಬುದು ಇನ್ನೂ ಪತ್ತೆಯಾಗಿಲ್ಲ.
ಸದ್ಯ ಲಭ್ಯವಾಗಿರುವ ಮಾಹಿ ಪ್ರಕಾರ ಈಸ್ಟರ್ ಆಚರಣೆಯನ್ನೇ ಗುರಿಯಾಗಿಸಿಕೊಂಡು ದಾಳಿ ನಡೆದಿದೆ ಎನ್ನಲಾಗಿದೆ. ಅಂದಹಾಗೆ, ಸ್ಫೋಟದ ಹಿಂದೆ ಯಾರಿದ್ದಾರೆ ಎನ್ನುವ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬಂದಿಲ್ಲ