ಶ್ರೀನಗರ:
ಕಣಿವೆ ರಾಜ್ಯದಲ್ಲಿ ಗೊಂದಲ ಹಾಗೂ ಆತಂಕ ಮುಂದುವರೆದ ಬೆನ್ನಲ್ಲೇ ಇಂದು ಬೆಳಗ್ಗೆ 6 ಗಂಟೆಯಿಂದ ಅನ್ವಯವಾಗುವಂತೆ ಶ್ರೀನಗರ ಜಮ್ಮು ಸೇರಿ ರಾಜ್ಯಾದ್ಯಂತ ನಿಷೇಧಾಜ್ಞೆ ಹೇರಲಾಗಿದೆ. ಕಾಶ್ಮೀರದ ವಿಶೇಷ ಸ್ಥಾನಮಾನ, ರಾಜ್ಯದ ತ್ರಿ ವಿಭಜನೆ ಸೇರಿ ಇತರೆ ವಿಚಾರಗಳ ಮೇಲೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂಬ ಸಂದೇಹಗಳ ಮಧ್ಯೆಯೇ ಈ ಆದೇಶವಾಗಿದೆ. ಹಾಗೆಯೇ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆಗಸ್ಟ್ 5-10ರವರೆಗೆ ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ.
ಹಾಗೆಯೇ ರಾಜ್ಯಾದ್ಯಂತ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಪ್ರತ್ಯೇಕತಾವಾದಿಗಳ ಸಾವು ಸೇರಿ ಇತರೆ ವಿಚಾರಗಳ ಬಗ್ಗೆ ಕಣಿವೆ ರಾಜ್ಯದಲ್ಲಿ ಸುಳ್ಳು ಸುದ್ದಿ ಹಬ್ಬುತ್ತಿರುವ ಬೆನ್ನಲ್ಲೇ ಈ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬ ತಿಳಿದುಬಂದಿದೆ
ಸಾಮಾನ್ಯವಾಗಿ ಬುಧವಾರ ಅಥವಾ ಗುರುವಾರ ನಡೆಯಬೇಕಿದ್ದ, ಕೇಂದ್ರ ಸಚಿವ ಸಂಪುಟ ಸಭೆ ಇಂದು ಸಂಸತ್ ಭವನದಲ್ಲಿ ನಡೆಯುತ್ತಿದೆ.ಕಾಶ್ಮೀರ ವಿಚಾರದ ಬಗ್ಗೆ ಈ ಸಭೆಯಲ್ಲಿ ಏನಾದರೂ ತೀರ್ಮಾನ ಮಾಡಬಹುದೇನೋ ಎಂಬ ಸಂದೇಹಗಳು ವ್ಯಕ್ತವಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
