ಮೈಸೂರು ಜಿಲ್ಲೆಯಲ್ಲಿ ಲಾಕ್​ಡೌನ್ ಸಡಿಲಿಕೆ ಇಲ್ಲ : ಸಚಿವ ಸೋಮಶೇಖರ್

ಬೆಂಗಳೂರು: 

   ಮೈಸೂರು ರೆಡ್ ಝೋನ್ ಇರುವುದರಿಂದ ಜಿಲ್ಲೆಯಲ್ಲಿ ಲಾಕ್​ಡೌನ್ Lockdown ಸಡಿಲಿಕೆ ಇಲ್ಲ. ಮೆಡಿಕಲ್ ಎಮರ್ಜೆನ್ಸಿಯಂತಹ ತುರ್ತು ಪರಿಸ್ಥಿತಿಗಳಿಗೆ ಮಾತ್ರ ಓಡಾಟಕ್ಕೆ ಅನುಮತಿ ಕೊಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ (ST Somashekhar)  ತಿಳಿಸಿದರು.

    ಕೃಷಿ ಚಟುವಟಿಕೆಗೆ  ಅನುಮತಿ ಕೊಡಲಾಗಿದೆ. ಉಳಿದಂತೆ ಈ ಹಿಂದಿನ ಕ್ರಮವೇ ಮುಂದುವರಿಯುತ್ತದೆ. ಐಟಿ-ಬಿಟಿಗೆ ಅಗತ್ಯವಿರುವಷ್ಟು ಮಾತ್ರ ಅನುಮತಿ ಕೊಡಲಾಗಿದ್ದು, ಪರಿಸ್ಥಿತಿ ನೋಡಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.

   ಇನ್ನು ಕಟ್ಟಡ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ ಕಟ್ಟಡ ಕಾರ್ಮಿಕರು ಮೈಸೂರು ಜಿಲ್ಲೆಯವರಾಗಿದ್ದು, ಇಲ್ಲೇ ಇದ್ದರೆ ಮಾತ್ರ ಕೆಲಸ ಮಾಡಬಹುದು. ಹೊರ ಜಿಲ್ಲೆ ಇಲ್ಲವೇ ರಾಜ್ಯಗಳಿಂದ ಈ ಸಂದರ್ಭದಲ್ಲಿ ಇಲ್ಲಿಗೆ ಬಂದು ಕೆಲಸ ಮಾಡಲು ಅನುಮತಿ ಇಲ್ಲ. ತೀರಾ ತುರ್ತು ಇದ್ದವರು ಅನುಮತಿ ಪಡೆದು ಕೆಲಸ ಮಾಡಿಸಿಕೊಳ್ಳಬಹುದು. ಇನ್ನು ಕಬ್ಬಿಣ ಹಾರ್ಡ್‌ವೇರ್ ಅಂಗಡಿಗಳು ತೆರೆಯುವಂತಿಲ್ಲ. ಪ್ಲಂಬರ್ ಎಲೆಕ್ಟ್ರಿಕ್ ಕೆಲಸಗಳಿಗೆ ಪೊಲೀಸ್ ಅನುಮತಿ ಅವಶ್ಯಕ. ಉಳಿದ ವಿಷಯಗಳಿಗೆ ಮೇ 3ನೇ ತಾರೀಖಿನವರೆಗೆ ಯಾವುದೇ ಕಾರಣಕ್ಕೂ ಅನುಮತಿ ಇಲ್ಲ. ಆಮೇಲೆ ಈ ಬಗ್ಗೆ ಪರಿಶೀಲನೆ ನಡೆಸಿ ಮುಂದೆ ಏನು ಮಾಡಬಹುದು ಎಂದು ತೀರ್ಮಾನ ಮಾಡಲಾಗುವುದು ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link