ಕೆನಡಾ : ಗನ್​ಮ್ಯಾನ್​ ಗುಂಡಿನ ದಾಳಿಗೆ 16 ಸಾವು

ಟೊರಂಟೋ :

    ಕೆನಡಾದಲ್ಲಿ ಕೊರೋನಾ ಸೋಂಕಿನಿಂದ ಈಗಾಗಲೇ 1,587 ಜನ ಸಾವನ್ನಪ್ಪಿದ್ದಾರೆ. ಇದರ ನಡುವೆ ಮತ್ತೊಂದು ಆಘಾತಕಾರಿ ಘಟನೆ ನಡೆದಿದ್ದು, ನಿನ್ನೆ ರಾತ್ರಿ ಪೊಲೀಸ್ ಸಮವಸ್ತ್ರ ಧರಿಸಿದ ಗನ್​ಮ್ಯಾನ್​ ಇದ್ದಕ್ಕಿದ್ದಂತೆ ಗುಂಡಿನ ದಾಳಿ ನಡೆಸಿದ್ದರಿಂದ 16 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಕೆನಡಾದ ಇತಿಹಾಸದಲ್ಲೇ ಇದು ಅತಿ ಭೀಕರ ಕೃತ್ಯ ಎನ್ನಲಾಗುತ್ತಿದೆ. ಕೆನಡಾದ ನೋವಾ ಸ್ಕಾಟಿಯಾದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು 51 ವರ್ಷದ ಗೇಬ್ರಿಯಲ್ ವೋರ್ಟ್​ಮನ್ ಎಂದು ಗುರುತಿಸಲಾಗಿದ್ದು, ಈತ ಕೂಡ ಸಾವನ್ನಪ್ಪಿರುವ ಸಾಧ್ಯತೆಯಿದೆ.


   ಪೊಲೀಸ್ ಯೂನಿಫಾರಂನಲ್ಲಿ ಬಂದಿದ್ದ ಈತ ನೋವಾ ಸ್ಕಾಟಿಯಾದ ಹಾಲಿಫಾಕ್ಸ್ ಬಳಿ ಇರುವ ಪೋರ್ಟಾಪಿಕ್ ಎಂಬ ಪ್ರದೇಶದಲ್ಲಿ ಮನೆಗಳಿಗೆ ನುಗ್ಗಿ ಇದ್ದಕ್ಕಿದ್ದಂತೆ ಗುಂಡಿನ ದಾಳಿ ನಡೆಸಿದ್ದ. ಗುಂಡಿನ ಸದ್ದು ಕೇಳಿ ಓಡಿಬಂದ ಪೊಲೀಸರು, ಅಕ್ಕಪಕ್ಕದವರ ಮೇಲೂ ಮನಬಂದಂತೆ ಗುಂಡು ಹಾರಿಸಿದ್ದ. ಇದರಿಂದಾಗಿ ಓರ್ವ ಮಹಿಳಾ ಪೊಲೀಸ್ ಕಾನ್ಸ್​ಟೇಬಲ್ ಸೇರಿದಂತೆ 15 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೂ ಅನೇಕರ ಸ್ಥಿತಿ ಗಂಭೀರವಾಗಿದೆ.  ಈತ ಅದಕ್ಕೆ ಅಡ್ಡಬಂದವರೆನ್ನೆಲ್ಲ ಗುಂಡು ಹಾರಿಸಿ ಸಾಯಿಸಿದ್ದಾನೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ದಾಳಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಟೈಮ್ಸ್​ ಆಫ್ ಇಂಡಿಯಾ ವರದಿ ಮಾಡಿದೆ.

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link