ತುಮಕೂರು:
ಜಿಲ್ಲೆಯ ಗುಬ್ಬಿ ತಾಲೂಕಿನ ಹೂವಿನಕಟ್ಟೆ ರಂಗನಾಥ ಸ್ವಾಮಿ ದೇವಾಲಯ ಸಮೀಪ ವ್ಯಕ್ತಿಯೊಬ್ಬರನ್ನು ಬೆಂಕಿ ಹಚ್ಚಿ ಸುಟ್ಟು ಕೊಲೆ ಮಾಡಲಾಗಿದೆ.
ಸುಮಾರು 35 ವರ್ಷ ವಯಸ್ಸಿನ ರಂಗನಾಥ್ ಎಂಬಾತನ್ನು ನಿನ್ನೆ ತಡ ರಾತ್ರಿ ಬೆಂಕಿ ಹಚ್ಚಿ ಸುಟ್ಟುಹಾಕಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿ ದಲಿತ ಸಮುದಾಯಕ್ಕೆ ಸೇರಿದವರು ಎನ್ನಲಾಗಿದೆ.
ಈ ಘಟನೆಯ ಕುರಿತು ಚೇಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
