ತುಮಕೂರು :
ಜಿಲ್ಲೆಯಲ್ಲಿ ಉಪಮುಖ್ಯಮಂತ್ರಿ ಪರಮೇಶ್ವರ ಹಠಾವೋ ಕಾಂಗ್ರೆಸ್ ಬಚಾವೋ ಎಂಬ ಪೋಸ್ಟರ್‌ಗಳನ್ನು ತುಮಕೂರು ನಗರದಾದ್ಯಂತ ಅಂಟಿಸಲಾಗಿದೆ.
ಪರಮೇಶ್ವರ್ ಹಠಾವೋ ಕಾಂಗ್ರೆಸ್ ಬಚಾವೋ, ಇಂತಿ ನೊಂದ ಕಾರ್ಯಕರ್ತರು ಎಂಬ ಪೋಸ್ಟರ್‌ನ ರಾತ್ರೋರಾತ್ರಿ ಅಂಟಿಸಲಾಗಿದೆ.
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಪ್ರಚಾರದ ವೇಳೆ ಪದೇಪದೆ ಪರಮೇಶ್ವರ್ ಅವರ ಚುನಾವಣೆಯ ಜವಾಬ್ದಾರಿ ಹೊತ್ತಿದ್ದಾರೆ ಎಂಬ ಮಾತನ್ನು ಹೇಳುತ್ತಲೇ ಬಂದಿದ್ದರು. ಅಲ್ಲದೆ ಕಾಂಗ್ರೆಸ್ ಬಂಡಾಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪರಮೇಶ್ವರ್ ಕೆಲಸ ಮಾಡುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ