ಪ್ರಕೃತಿ ಚಿಕಿತ್ಸೆಗಾಗಿ ಉಡುಪಿಗೆ ತೆರಳಿದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ

ಉಡುಪಿ:

  ಕೆಲ ದಿನಗಳ ಹಿಂದೆ ಆಯುರ್ವೇದಿಕ್ ಚಿಕಿತ್ಸೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿಗೆ ತೆರಳಿದ್ದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಇದೀಗ ಮತ್ತೆ ಉಡುಪಿಗೆ ಮರಳಿದ್ದಾರೆ ನಗರದ ಕಾಪುವಿನಲ್ಲಿರುವ ಸಾಯಿರಾಧಾ ಹೆರಿಟೇಜ್ ರೆಸಾರ್ಟ್ ನಲ್ಲಿ ಸಿಎಂಗೆ ಪ್ರಕೃತಿ ಚಿಕಿತ್ಸೆ ನೀಡಲಾಗುತ್ತಿದೆ.

  ಇವರ ಜೊತೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಕೂಡ ಒಂದು ವಾರದ ಕೋರ್ಸ್ ಕೊಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಮಾಜಿ ಪ್ರಧಾನಿ ಉಡುಪಿಗೆ ಆಗಮಿಸಿದ್ದಾರೆ.  ಆದರೆ ಶ್ರೀಲಂಕಾದ ಸ್ಫೋಟ ಪ್ರಕರಣ ನನ್ನನ್ನು ಘಾಸಿಗೊಳಿಸಿದೆ. ಸೋಮವಾರದಿಂದ ನನಗೆ ಇದೇ ತಲೆಯಲ್ಲಿ ಕಾಡುತ್ತಿದೆ.

   ಬಾಂಬ್ ಪ್ರಕರಣದಲ್ಲಿ ನನ್ನ ಆತ್ಮೀಯರು ಮರಣ ಹೊಂದಿದ್ದಾರೆ. ಮೂರು ನಾಲ್ಕು ದಿನ ಕಾಪುವಿನಲ್ಲಿ ಆಯುರ್ವೇದಿಕ್ ಚಿಕಿತ್ಸೆಗೆಂದು ಉಳಿದುಕೊಳ್ಳಬೇಕೆಂದಿದ್ದೆ. ಆದರೆ (ಏ. 22) ಸೋಮವಾರದಿಂದ ನನಗೆ ನೋವನ್ನು ತಡೆದುಕೊಳ್ಳಲಾಗುತ್ತಿಲ್ಲ. ಹೀಗಾಗಿ ವೈದ್ಯರ ಜೊತೆ ಚರ್ಚೆ ಮಾಡಿದ್ದೇನೆ. ಅವರು 27 ರ ನಂತರ ಮತ್ತೆ ಉಡುಪಿಗೆ ಬರಲು ಸೂಚಿಸಿದ್ದಾರೆ.

    ಚಿಕಿತ್ಸೆ ಮುಂದೂಡಿ ಕರ್ತವ್ಯ ಮಾಡಲು ಹೊರಟಿದ್ದೇನೆ ಎಂದು ತನ್ನ ಚಿಕಿತ್ಸೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿಗೆ ತೆರಳುವ ಮೂದಲು ಹೇಳಿದರು. ಮತ್ತು ರೆಸಾರ್ಟ್ ಸುತ್ತಮುತ್ತ ಮಾಧ್ಯಮಗಳನ್ನು ಬಿಡದಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ರೆಸಾರ್ಟ್ ಆಸುಪಾಸು ಮಾಧ್ಯಮಗಳಿಗೆ ಚಿತ್ರೀಕರಣವನ್ನೂ ನಿರ್ಬಂಧಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap