ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡದೆ ಹೆಚ್ಚಿನ ನೆರವು ನೀಡಲಿ- ಹೆಚ್ಡಿಕೆ

ಬೆಳಗಾವಿ:

   ಕಳೆದ ಮೂರು ದಿನಗಳಿಂದ ಜ್ವರ ಬಂದು ಚಿಕಿತ್ಸೆ ಪಡೆಯುತ್ತಿದ್ದೆ. ಆದರೆ ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದ ಆಗುತ್ತಿರುವ ಅವಾಂತರಗಳನ್ನು ಮಾಧ್ಯಮಗಳಲ್ಲಿ ನೋಡಿ ಬಂದಿದ್ಧೇನೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.  ಇಂದು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಎಚ್​ಡಿಕೆ, ಅನಾರೋಗ್ಯವಿದ್ದರೂ ನೆರೆಪೀಡಿತ ಪ್ರದೇಶಗಳ ವೀಕ್ಷಣೆಗೆ ಬಂದಿರುವುದಾಗಿ ತಿಳಿಸಿದರು. ಅಷ್ಟೇ ಅಲ್ಲದೇ, ಬೆಳಗಾವಿ, ಚಿಕ್ಕೋಡಿ, ಗದಗ,  ಧಾರಾವಾಡಕ್ಕೆ ಇಂದು ಹೋಗುತ್ತೇನೆ ಎಂದರು.

   ಈ ಬಾರಿ ಎಂದೂ ಕೇಳದ ಹಾನಿ ಆಗುತ್ತಿದೆ. ಬೆಳೆ ಹಾನಿ ಸೇರಿದಂತೆ ಜೀವ ಹಾನಿ ದೊಡ್ಡ ಮಟ್ಟದಲ್ಲಿ ಆಗುತ್ತಿದೆ. ಇದಕ್ಕೆ ಸರ್ಕಾರ ಹೆಚ್ಚು ಪರಿಹಾರ ಕೊಡಬೇಕು. ಆಹಾರ ಧಾನ್ಯ ಅವಶ್ಯಕತೆ ಇದ್ದರೆ ನಾನು ಸಹಾಯ ಮಾಡುತ್ತೇನೆ. ಸಂತ್ರಸ್ತರಿಗೆ ಮಧುರೈನಿಂದ ಹತ್ತು ಸಾವಿರ ಬೆಡ್​ಶೀಟ್​​ಗಳನ್ನು ತರಿಸಿಕೊಡುತ್ತೇನೆ ಎಂದು ಕುಮಾರಸ್ವಾಮಿ ಅಭಯ ನೀಡಿದರು.

   ಸರ್ಕಾರ ಕೆಲಸ ಮಾಡುತ್ತಿದೆ. ಈಗ ನಾನು ರಾಜಕೀಯ ಬೆರೆಸಲ್ಲ.ಇವತ್ತು ಇರುವ ರಾಜಕೀಯ ಪರಿಸ್ಥಿತಿಯಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಮೇಲೆ ಹೊಣೆ ಇದೆ. ಅವರು ಅಧಿಕಾರಿಗಳ ಮುಖಾಂತರ ಕೆಲಸ ಮಾಡಿಸಿಕೊಳ್ಳಬೇಕು. ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡದೆ ಇಂತಹ ಸಂದರ್ಭದಲ್ಲಿ ಹೆಚ್ಚಿನ ಪರಿಹಾರ ಕೊಡಬೇಕು ಎಂದು ಎಚ್​ಡಿಕೆ ಹೇಳಿದರು.

    ಯಡಿಯೂರಪ್ಪನವರಿಗೆ ವಯಸ್ಸಿನ ಸಮಸ್ಯೆಗಳು ಇರಬಹುದು. ಅವರಿಗೆ ಸಚಿವ ಸಂಪುಟ ಇಲ್ಲ. ಸರ್ಕಾರದಲ್ಲಿ ಮುಖ್ಯ ಕಾರ್ಯದರ್ಶಿಗಳು ಮತ್ತು ನುರಿತ ಉತ್ತಮ ಅಧಿಕಾರಿಗಳು ಇದ್ದಾರೆ. ಅವರಿಂದ ಮಾಹಿತಿ ಪಡೆದು ಕೂಡಲೇ ಸ್ಪಂದಿಸುವ ಕೆಲಸ ಮಾಡಲಿ ಎಂದು ಮಾಜಿ ಸಿಎಂ ಸಲಹೆ ನೀಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap