ಬೆಂಗಳೂರು:
ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆಗಿ ನೇಮಕವಾದ ಕೇವಲ 47 ದಿನದಲ್ಲೇ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಸರ್ಕಾರದ ಕ್ರಮದ ವಿರುದ್ಧ ಕೋರ್ಟ್ ಮೆಟ್ಟಿಲೇರುವ ನಿರ್ಧಾರ ಮಾಡಿದ್ದಾರೆ.
ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಅಲೋಕ್ ಕುಮಾರ್ ಅವರಿಗೆ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆಗಿ ನೇಮಕ ಮಾಡಲಾಗಿತ್ತು. ಆದರೆ ಈಗ ಯಡಿಯೂರಪ್ಪ ಅವರ ಸರ್ಕಾರ ಬಂದಿದ್ದು, ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದ ವಾರದ ಒಳಗೆ ಅಲೋಕ್ ಕುಮಾರ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಐಪಿಎಸ್ ಅಧಿಕಾರಿಗಳನ್ನು ಕನಿಷ್ಟ ಒಂದು ವರ್ಷ ನಿಖರ ಕಾರಣ ಇಲ್ಲದೆ ವರ್ಗಾವಣೆ ಮಾಡುವಂತಿಲ್ಲ ಎಂದು ನಿಯಮಗಳು ಹೇಳುತ್ತವೆ, ಹಾಗಾಗಿ ತಮ್ಮ ವರ್ಗಾವಣೆಯನ್ನು ಖಂಡಿಸಿ ಅಲೋಕ್ ಕುಮಾರ್ ಅವರು ಸಿಎಟಿ ಗೆ ಅರ್ಜಿ ಹಾಕಲು ಚಿಂತಿಸಿದ್ದಾರೆ. ಸದ್ಯಾ ಈಗ ಇದೇ ಭಾಸ್ಕರ್ ರಾವ್ ಅವರನ್ನು ಅಲೋಕ್ ಕುಮಾರ್ ಅವರ ಸ್ಥಾನಕ್ಕೆ ನೇಮಕವಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








