ಬೆಂಗಳೂರು :
ಅರಭಾವಿ ಕ್ಷೇತ್ರದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಚಿವ ಸ್ಥಾನ ಕೈ ತಪ್ಪಿದ ಬಳಿಕ ಅಸಮಾಧಾನಗೊಂಡಿದ್ದಾರೆ. ಬೆಳಗಾವಿ ನಾಯಕರನ್ನು ಸಮಾಧಾನ ಪಡಿಸಲು ಯಡಿಯೂರಪ್ಪ ತಂತ್ರವೊಂದನ್ನು ರೂಪಿಸಿದ್ದಾರೆ. ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ಅಧ್ಯಕ್ಷ ಸ್ಥಾನಕ್ಕೆ ಆಗಸ್ಟ್ 31ರಂದು ಚುನಾವಣೆ ನಡೆಸುವುದಾಗಿ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ಹೇಳಿದೆ. ಕೆಎಂಎಫ್ ಅಧ್ಯಕ್ಷ ಹುದ್ದೆಯನ್ನು ಬಾಲಚಂದ್ರ ಜಾರಕಿಹೊಳಿಗೆ ನೀಡಲು ಯಡಿಯೂರಪ್ಪ ಮುಂದಾಗಿದ್ದಾರೆ.
ಬಾಲಚಂದ್ರ ಜಾರಕಿಹೊಳಿ ಶನಿವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡಿದ್ದರು. ಮತ್ತೊಂದು ಕಡೆ ಜೆಡಿಎಸ್ ನಾಯಕ ಎಚ್. ಡಿ. ರೇವಣ್ಣ ಮತ್ತು ಹಗರಿಬೊಮ್ಮನಹಳ್ಳಿ ಕಾಂಗ್ರೆಸ್ ಶಾಸಕ ಭೀಮಾ ನಾಯ್ಕ್ ಕೆಎಂಎಫ್ ಅಧ್ಯಕ್ಷಪಟ್ಟದ ಮೇಲೆ ಕಣ್ಣಿಟ್ಟಿದ್ದಾರೆ.
ಕೆಎಂಎಫ್ ಅಧ್ಯಕ್ಷ ಹುದ್ದೆಯ ಚುನಾವಣೆ ವಿವಾದ ಹೈಕೋರ್ಟ್ ಮೆಟ್ಟಿಲೇರಿತ್ತು. ಜುಲೈ 29ರಂದು ಚುನಾವಣೆ ನಡೆಯಬೇಕಿತ್ತು. ಚುನಾವಣೆ ಮುಂದೂಡಿ ಸಹಕಾರ ಇಲಾಖೆ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಎಚ್. ಡಿ. ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಈಗ ಅಧ್ಯಕ್ಷ ಪಟ್ಟ ಯಾರಿಗೆ? ಎಂಬುದು ಕಾದುನೋಡಬೇಕಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ