ಬೆಂಗಳೂರು:
ಉತ್ತರ ಕರ್ನಾಟಕದಲ್ಲಿ ಭಾರಿ ಪ್ರವಾಹ ಹಿನ್ನೆಲೆಯಲ್ಲಿ ಸಂತ್ರಸ್ತರ ನೆರವಿಗೆ ಜೆಡಿಎಸ್ ಪಕ್ಷ ಮುಂದಾಗಿದ್ದು, ಸಂತ್ರಸ್ತರಿಗೆ ಬೇಕಾದ ಅಗತ್ಯ ವಸ್ತುಗಳ ರವಾನೆಗೆ ಸಿದ್ಧತೆ ಮಾಡಿಕೊಂಡಿದೆ.
50 ಸಾವಿರ ಬ್ಲಾಂಕೆಟ್ಸ್, 15 ಸಾವಿರ ಬೆಡ್ಶೀಟ್, ಅಕ್ಕಿ ಹಾಗೂ ಬಿಸ್ಕೆಟ್ ಸೇರಿದಂತೆ ಅಗತ್ಯ ವಸ್ತುಗಳನ್ನು ರವಾನೆ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ. ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಿಂದ ವಸ್ತುಗಳನ್ನು ರವಾನಿಸಲಾಗುತ್ತಿದೆ. ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಅಗತ್ಯ ವಸ್ತುಗಳನ್ನು ಸಂತ್ರಸ್ತರಿಗೆ ತಲುಪಿಸಲಾಗುತ್ತಿದೆ.
ಇನ್ನು ನಿಖಿಲ್ ಕುಮಾರಸ್ವಾಮಿ ಅವರು 5 ಸಾವಿರ ಸೀರೆ, 5 ಸಾವಿರ ಪಂಚೆ, ಅಗತ್ಯ ವಸ್ತುಗಳ ಜೊತೆಗೆ ತೆರಳಲು ತಯಾರಿ ಮಾಡಿಕೊಂಡಿದ್ದಾರೆ. ಅವರಿಗೆ ಸಾಥ್ ನೀಡಲು ರಾಜ್ಯ ಜೆಡಿಎಸ್ ಪದಾಧಿಕಾರಿಗಳು ಭರ್ಜರಿ ತಯಾರಿಯಾಗಿದ್ದಾರೆ.
ಹುಬ್ಬಳ್ಳಿ, ನರಗುಂದ, ನವಿಲು ಗುಂದಾ, ಬೆಳಗಾವಿ, ಬಾಗಲಕೋಟೆ, ಕೂಡಲ ಸಂಗಮ, ಯಾದಗಿರಿ ಮುಂತಾದ ಪ್ರದೇಶಗಳಿಗೆ ಈ ಎಲ್ಲ ಅಗತ್ಯ ವಸ್ತುಗಳನ್ನು ರವಾನೆ ಮಾಡಲು ಯೋಜನೆ ರೂಪಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
