ಬೆಂಗಳೂರು :
ಭೂಗತ ಪಾತಕಿ ಕರಾವಳಿ ಮೂಲದ ರವಿ ಪೂಜಾರಿಯನ್ನು ಶೀಘ್ರವೇ ಭಾರತಕ್ಕೆ ಹಸ್ತಾಂತರ ಮಾಡಲು ದಕ್ಷಿಣ ಆಫ್ರಿಕಾ ಸರ್ಕಾರ ಸಿದ್ಧತೆ ನಡೆಸಿದೆ.
ರವಿ ಪೂಜಾರಿ ಆಫ್ರಿಕಾದ ಸೆನೆಗಲ್ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಅಷ್ಟೇ ಅಲ್ಲ ಎರಡು ಬಾರಿ ಆತ ಬಂಧನಕ್ಕೆ ಒಳಗಾಗಿದ್ದ. ಈತನನ್ನು ವಶಕ್ಕೆ ಪಡೆಯಲು ರಾಜ್ಯ ಪೊಲೀಸರು ಪ್ರಯತ್ನ ನಡೆಸಿದ್ದರು. ಆದರೆ, ಕಾನೂನು ತೊಡಕುಗಳಿಂದ ಹಸ್ತಾಂತರ ವಿಳಂಬವಾಗಿತ್ತು. ಆದರೆ, ಈಗ ಈ ಕಾನೂನು ತೊಡಕು ನಿವಾರಣೆ ಆಗಿದ್ದು, ಈತ ನಾಲ್ಕೈದು ದಿನಗಳಲ್ಲಿ ಭಾರತಕ್ಕೆ ಹಸ್ತಾಂತರಗೊಳ್ಳಲಿದ್ದಾನೆ.
ಇನ್ನು ನಾಲ್ಕೈದು ದಿನಗಳಲ್ಲಿ ಭೂಗತ ಪಾತಾಕಿ ರವಿ ಪೂಜಾರಿ ಭಾರತಕ್ಕೆ ಹಸ್ತಾಂತರಗೊಳ್ಳಲಿದ್ದಾನೆ. ಮುಂಬೈ ಪೊಲೀಸರು ಮೊದಲು ಈತನನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಬಳಿಕ ರಾಜ್ಯ ಪೊಲೀಸರಿಗೆ ಈತನನ್ನು ಹಸ್ತಾಂತರ ಮಾಡಲಾಗುತ್ತದೆ.
90ರ ದಶಕದಲ್ಲಿ ಭೂಗತ ಲೋಕದಲ್ಲಿ ದೊಡ್ಡಮಟ್ಟದಲ್ಲಿ ಹೆಸರು ಮಾಡಿದ್ದ ರವಿ ಪೂಜಾರಿ ದುಬೈನಲ್ಲಿ ಕೂತೇ ಮುಂಬೈ, ಮಂಗಳೂರು ಮತ್ತು ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದ ಎನ್ನಲಾಗಿದೆ. ವಿದೇಶದಲ್ಲಿ ಅಡಗಿ ಕುಳಿತಿರುವ ಭೂಗತ ಪಾತಕಿ ರವಿ ಪೂಜಾರಿ ಉದ್ಯಮಗಳು ಮತ್ತು ರಾಜಕಾರಣಿಗಳಿಗೆ ಕರೆ ಮಾಡಿ ಹಣ ನೀಡುವಂತೆ ಬೆದರಿಕೆವೊಡ್ಡುತ್ತಿದ್ದ.
ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಹಲವು ರಾಜಕಾರಣಿಗಳಿಗೆ ಆರೋಪಿ ಹೆಸರಿನಲ್ಲಿ ಕರೆ ಬಂದಿದ್ದವು. ಹೀಗೆ ವಿದೇಶದಲ್ಲಿ ಕುಳಿತು ಹಫ್ತಾ ವಸೂಲಿ ಮಾಡುವುದನ್ನೇ ದಂಧೆಯಾಗಿಸಿಕೊಂಡಿದ್ದ. ಈತನ ವಿರುದ್ಧ ಬೆಂಗಳೂರಿನಲ್ಲಿ 39, ಮಂಗಳೂರಿನಲ್ಲಿ 36, ಉಡುಪಿಯಲ್ಲಿ 11 ಮತ್ತು ಮೈಸೂರು, ಹುಬ್ಬಳ್ಳಿ-ಧಾರವಾಡ, ಕೋಲಾರ ಮತ್ತು ಶಿವಮೊಗ್ಗದಲ್ಲಿ ತಲಾ ಒಂದೊಂದು ಪ್ರಕರಣಗಳು ದಾಖಲಾಗಿದ ಎಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
