ಬೆಂಗಳೂರು:
ವೈದ್ಯರು, ನರ್ಸ್ ಗಳು ಹಾಗೂ ವೈದ್ಯಕೀಯ ಸಹಾಯಕ ರಿಗೆ ಈಗಾಗಲೇ ಮನೆ ಮಾಲೀಕರು ಮನೆಗೆ ಬರಬೇಡಿ, ಹಾಗೂ ಮನೆ ಖಾಲಿ ಮಾಡಿ ಎಂದು ಕಿರುಕುಳ ನೀಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಸರ್ಕಾರ ನಗರ ಪಾಲಿಕೆಗಳಿಗೆ ಹಾಗೂ ಪೊಲೀಸರಿಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದೆ.
ಕೊರೊನ ವೈರಸ್ ತಡೆಗಟ್ಟಲು ಅಗತ್ಯ ಸೇವೆ ಹೊರೆತು ಪಡಿಸಿ ಉಳಿದ ಎಲ್ಲಾ ಸೇವೆಯನ್ನು ಬಂದ್ ಮಾಡಲಾಗಿದೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಅಗತ್ಯ ಸೇವೆಯಲ್ಲಿರುವವರ ವಿರುದ್ಧ ಮನೆ ಮಾಲೀಕರು ಮನೆಗೆ ಬಾರದಿರಲು ನಿಷೇಧಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಆದೇಶ ಹೊರಡಿಸಿದೆ.
ಹೀಗಾಗಿ ಪ್ರತಿನಿತ್ಯ ಕ್ರಮ ಕೈಗೊಂಡಿದರ ಬಗ್ಗೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ವರದಿಯನ್ನು ಪೊಲೀಸ್ ಇಲಾಖೆ, ನಗರ ಪಾಲಿಕೆ , ಪುರಸಭೆಗಳು ಸಲ್ಲಿಸಬೇಕು ಎಂದು ಸರ್ಕಾರ ಹೇಳಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ