ಚಿತ್ರದುರ್ಗ:
ನಗರದ ಹೆದ್ದಾರಿಯಲ್ಲಿ ಇಂದು ಮುಂಜಾನೆ ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಗುಲ್ಬರ್ಗದಿಂದ ಬೆಂಗಳೂರು ಕಡೆಗೆ ಬಸ್ ತೆರಳುತ್ತಿತ್ತು.
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಹರ್ತಿಕೋಟೆ ಗ್ರಾಮದ ಬಳಿ ಲಾರಿಗೆ ಹಿಂಬದಿಯಿಂದ ಬಸ್ ಗುದ್ದಿದೆ. ಅಪಘಾತದ ತೀವ್ರತೆಗೆ ಚಾಲಕ ಪ್ರೇಮ್ ನಾಥ್ (45) ಮೃತಪಟ್ಟಿದ್ದಾನೆ . ಮೃತ ಚಾಲಕ ಗುಲ್ಬರ್ಗ ಮೂಲದವರು ಎಂದು ತಿಳಿದು ಬಂದಿದೆ. ನಿರ್ವಾಹಕ ಸೇರಿ 8 ಮಂದಿಗೆ ಗಾಯಗಳಾಗಿವೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹಿರಿಯೂರು ತಾಲ್ಲೂಕಿನ ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
