ನವದೆಹಲಿ:
ಗ್ವಾಲಿಯರ್ ಬಳಿ ಭಾರತೀಯ ವಾಯುಪಡೆಯ ಮಿಗ್-21 ವಿಮಾನ ಪತನವಾಗಿದೆ. ಘಟನೆಯಲ್ಲಿ ಇಬ್ಬರೂ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ. ಮಿಗ್-21 ತರಬೇತಿ ವಿಮಾನವಾಗಿದ್ದು, ಭಾರತೀಯ ವಾಯುಪಡೆಗೆ ಸೇರಿದ್ದಾಗಿದೆ. ವಿಮಾನದಲ್ಲಿದ್ದ ಪೈಲಟ್‌ಗಳು ಗ್ರೂಪ್ ಕ್ಯಾಪ್ಟನ್ ಮತ್ತು ಸ್ಕ್ವಾಡ್ರನ್ ಲೀಡರ್ ಎಂದು ತಿಳಿದು ಬಂದಿದೆ.
ವಿಮಾನವು ಗ್ವಾಲಿಯರ್ ಏರ್ಬೇಸ್ನಿಂದ ತರಬೇತಿ ಕಾರ್ಯಾಚರಣೆಯನ್ನು ಆರಂಭಿಸಿತ್ತು. ಸುಮಾರು 10 ಗಂಟೆ ವೇಳೆಗೆ ಏರ್ ಫೀಲ್ಡ್ ಬಳಿ ಅಪಘಾತಕ್ಕೀಡಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನ ಪತನಕ್ಕೆ ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ.
Madhya Pradesh: MiG 21 Trainer aircraft of the Indian Air Force crashed in Gwalior, today. Both the pilots, including a Group Captain and a squadron leader, managed to eject safely. pic.twitter.com/Gdmik5RhTN
— ANI (@ANI) September 25, 2019
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ