ನವದೆಹಲಿ:
ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಮೂವರು ಸಿಬ್ಬಂದಿ ಹುತಾತ್ಮರಾಗಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ಪಟ್ಟಣದ ಚೆಕ್ ಪೋಸ್ಟ್ನಲ್ಲಿ ಭಯೋತ್ಪಾದಕರು ಸಿಆರ್ಪಿಎಫ್ ಮತ್ತು ಪೊಲೀಸ್ ಸಿಬ್ಬಂದಿಗಳ ಜಂಟಿ ಪಕ್ಷದ ಮೇಲೆ ದಾಳಿ ನಡೆಸಿದರು.ಭಯೋತ್ಪಾದಕರನ್ನು ಪತ್ತೆ ಹಚ್ಚಲು ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.
ಒಂದು ವಾರದೊಳಗೆ ಇದು ಕಾಶ್ಮೀರ ಕಣಿವೆಯಲ್ಲಿ ಅರೆಸೈನಿಕರ ವಿರುದ್ಧದ ಮೂರನೇ ದಾಳಿಯಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ