ನವದೆಹಲಿ :
ಟ್ರಾಫಿಕ್ ಫೈನ್ ಇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಕೇಂದ್ರ ಸರ್ಕಾರ ಇದೀಗ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ ಎಂಡು ತಿಳಿದುಬಂದಿದೆ. ಹೊಸ ಮೋಟಾರು ವಾಹನ ತಿದ್ದುಪಡಿ ಕಾಯ್ದೆಯಡಿ ಸಂಚಾರ ನಿಯಮ ಉಲ್ಲಂಘನೆಗಾಗಿ ದುಬಾರಿ ದಂಡವನ್ನು ಕಟ್ಟಬೇಕಿರುವುದರಿಂದ ಹೆಚ್ಚಿನ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದಕಾರಣ ಈ ದಂಡದ ಮೊತ್ತವನ್ನು ಕಡಿತ ಮಾಡಲು ರಾಜ್ಯ ಸರ್ಕಾರವು ಮುಂದಾಗದೆ.
ಆದರೆ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಕೇಂದ್ರ ಸರ್ಕಾರ ಕಾನೂನು ಹೋರಾಟಕ್ಕೆ ಮುಂದಾಗಿದ್ದು, ಮೋಟಾರು ವಾಹನ ತಿದ್ದುಪಡಿ ಕಾಯ್ದೆಯಡಿ ಕೇಂದ್ರ ಸರ್ಕಾರ ಜಾರಿ ಮಾಡಿದ ದಂಡವನ್ನು ಕಡಿಮೆ ಮಾಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆಯೇ ಇಲ್ಲವೇ ಎಂಬುದರ ಕುರಿತು ಕಾನೂನು ಸಲಹೆ ಪಡೆಯಲು ಮುಂದಾಗಿದೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ