ಮದ್ಯದ ಬಾಟಲ್​ ಹಿಡಿದು ಫೋಟೋಗೆ ಪೋಸ್ : ಮೂವರು ಕಂದಾಯ ಇಲಾಖೆ ಅಧಿಕಾರಿಗಳು ಅಮಾನತು

ಮಧ್ಯಪ್ರದೇಶ:

     ಮದ್ಯದ ಬಾಟಲ್​ಗಳನ್ನು ಹಿಡಿದು ನಿಂತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಮೂವರು ಕಂದಾಯ ಇಲಾಖೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

   ಅಜಯ್ ಧಾಕಡ್, ಧರ್ಮೇಂದ್ರ ಮೆಹ್ರಾ ಮತ್ತು ದಯರಾಮ್ ಅರ್ಮಾ ಅಮಾನತುಗೊಂಡ ಕಂದಾಯ ಇಲಾಖೆ ಅಧಿಕಾರಿಗಳು. ಈ ಮೂವರು ಅಧಿಕಾರಿಗಳು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಸೆಲ್ಫಿ ತೆಗೆದುಕೊಂಡಿದ್ದಾರೆ.

  ಲಾಕ್’ಡೌನ್ ನಡುವಲ್ಲೇ ಮದ್ಯ ಸಿಗದೆ ಹಲವರು ಸಂಕಷ್ಟ ಎದುರಿಸುತ್ತಿದ್ದು, ಈ ನಡುವಲ್ಲೇ ಅಧಿಕಾರಿಗಳು ಮದ್ಯದ ಬಾಟಲಿಗಳನ್ನು ಹಿಡಿದು ಫೋಟೋಗೆ ಪೋಸ್ ನೀಡಿದ್ದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಸ್ ಆಗಿತ್ತು. ಅಲ್ಲದೆ, ಈ ಬಗ್ಗೆ ಸಾಕಷ್ಟು ಟೀಕೆಗಳೂ ವ್ಯಕ್ತವಾಗಿದ್ದವು. 

     ರೈಸನ್ ಜಿಲ್ಲಾಧಿಕಾರಿ ಸೂಚನೆಯ ಮೇರೆಗೆ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಬ್ರಜೆಂದ್ರ ಸಿಂಗ್ ರಾವತ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap