ಮುಂಬೈ:
ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದೆ. 200ಕ್ಕೂ ಹೆಚ್ಚು ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ.
ಮಹಾರಾಷ್ಟ್ರದ ಪಾಲ್ಗಾರ್ ಜಿಲ್ಲೆಯ ವಾಸವಿ ವಿಹಾರಗ ಮುನ್ಸಿಪಲ್ ವ್ಯಾಪ್ತಿಯಲ್ಲಿ 8 ದಿನದ ಮಗುವಿಗೆ ಕೊರೋನಾ ಸೋಂಕು ತಗುಲಿದೆ. ಆದರೆ ಮಗುವಿನ ತಾಯಿಗೆ ಕೊರೋನಾ ಸೋಂಕು ಇರಲಿಲ್ಲ ಎಂಬುದನ್ನು ವೈದ್ಯರು ದೃಢಪಡಿಸಿದ್ದಾರೆ ಆದರೆ ಹಸುಗೂಸಿಗೆ ಕೊರೋನಾ ಸೋಂಕು ಇದೆ ಎಂಬುದು ಖಚಿತವಾಗಿದೆ. ವಿವಿಎಂಸಿಯ ಜುಚಂದ್ರ ಮೆಡಿಕಲ್ನಲ್ಲಿ ಕೊರೋನಾ ಪಾಸಿಟಿವ್ ಪರೀಕ್ಷೆ ನಡೆಸಲಾಗಿದೆ. ಮಗುವಿನ ತಾಯಿಗೆ ಕೊರೋನಾ ನೆಗೆಟಿವ್ ಬಂದಿದೆ. ಮಗು ಹುಟ್ಟಿದ ಬಳಿಕ ಹಸುಗೂಸಿಗೆ ಕೊರೋನಾ ಇರುವುದು ಖಚಿತವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
