ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ಇನ್ನಿಲ್ಲ!

ಮುಂಬೈ: 

   ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ಕಾಯಿಲೆ ವಿರುದ್ಧ ಹೋರಾಡುತ್ತಿದ್ದ ಬಾಲಿವುಡ್ ಹಿರಿಯ ನಟ  ರಿಷಿ ಕಪೂರ್ ಗುರುವಾರ ಬೆಳಿಗ್ಗೆ  ಇಹಲೋಕ ತ್ಯಜಿಸಿದ್ದಾರೆ. ಮೃತರು ಪತ್ನಿ ನೀತು ಕಪೂರ್ ಮತ್ತು ಮಕ್ಕಳಾದ ರಿದ್ಧಿಮಾ ಕಪೂರ್ ಸಾಹ್ನಿ ಮತ್ತು ನಟ ರಣಬೀರ್ ಕಪೂರ್ ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

   ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ರಿಷಿ ಕಪೂರ್ ಅವರನ್ನು ಬುಧವಾರ ರಾತ್ರಿ ಮುಂಬೈನ ಸರ್  ಎಚ್ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಸಲಾಗಿತ್ತು.

  ಫೆಬ್ರವರಿಯಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ದೆಹಲಿಯಲ್ಲಿ ಕುಟುಂಬದ ಕಾರ್ಯಕ್ರಮಕ್ಕೆ ತೆರಳಿದ್ದಾಗ ಅವರಿಗೆ ಅನಾರೋಗ್ಯ ಕಾಡಿತ್ತು. ಹೀಗಾಗಿ ಅವರು ಆಸ್ಪತ್ರೆ ಸೇರಿದ್ದರು. ಈ ವೇಳೆ ಅವರಿಗೆ ಇನ್​ಫೆಕ್ಷನ್​ ಆಗಿತ್ತು ಎಂದು ಹೇಳಲಾಗಿತ್ತು. ಮುಂಬೈಗೆ ವಾಪಾಸಾದ ನಂತರ ವೈರಲ್​ ಫಿವರ್​ ಕಾಣಿಸಿಕೊಂಡಿದ್ದರಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

  

Recent Articles

spot_img

Related Stories

Share via
Copy link