ಬೆಂಗಳೂರು; ಪೊಲೀಸ್​ ಜೀಪಿಗೆ ಕ್ಯಾಂಟರ್ ಡಿಕ್ಕಿ!!

ಬೆಂಗಳೂರು;

   ಪೊಲೀಸ್ ಜೀಪಿಗೆ ಡಿಕ್ಕಿ ಹೊಡೆದ ಕ್ಯಾಂಟರ್  ಪರಿಣಾಮ ಜೀಪ್ ಸಂಪೂರ್ಣ ಜಖಂ ಆಗಿದ್ದು, ಪೊಲೀಸ್ ಪೇದೆಗೆ ಗಂಭೀರ ಗಾಯಗಳಾಗಿರುವ ಘಟನೆ ನಗರದ ಯಲಹಂಕದಲ್ಲಿ ನಡೆದಿದೆ.  ಘಟನೆಯಲ್ಲಿ ಸಿಸಿಬಿ ಪೊಲೀಸ್ ಪೇದೆ ಕುಮಾರಸ್ವಾಮಿ ಅವರ ಕಾಲಿನ ಮೂಳೆ ಮುರಿದಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

     ನಿನ್ನೆ ರಾತ್ರಿ 11.30 ರ ಸುಮಾರಿಗೆ ಯಲಹಂಕದ ಏರ್ ಪೋರ್ಸ್ ಸಿಗ್ನಲ್ ಬಳಿ ಕ್ಯಾಂಟರ್ ಪೊಲೀಸ್ ಜೀಪಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ